ಕಿಚ್ಚ ಸುದೀಪ್ ಸೋದರಳಿಯ ಸಂಚಿತ್ ಸಂಜೀವ್ ನಟನೆಯ ‘ಮ್ಯಾಂಗೋ ಪಚ್ಚ’ ಚಿತ್ರ ಜೂನ್.5ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಕೆಆರ್‌ಜಿ ಸ್ಟುಡಿಯೋಸ್ ಹಾಗೂ ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ ಸಂಸ್ಥೆಗಳು ಜಂಟಿಯಾಗಿ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ವಿವೇಕ್ ಆಕ್ಷನ್ ಕಟ್ ಹೇಳಿದ್ದಾರೆ.

‘ಮ್ಯಾಂಗೋ ಪಚ್ಚ’ ಸಿನಿಮಾ ಸೆನ್ಸಾರ್ ಮುಗಿಸಿ ರಿಲೀಸ್ಗೆ ರೆಡಿಯಾಗಿದ್ದು, ಈಗಾಗಲೇ ಚಿತ್ರದ ಟೀಸರ್, ಸಾಂಗ್ಸ್, ಟ್ರೈಲರ್ ಬಿಡುಗಡೆಯಾಗಿ ಸಿನಿಪ್ರಿಯರ ಗಮನ ಸೆಳೆದಿದೆ. ಹೊಸ ಪ್ರತಿಭೆ ಸಂಚಿತ್ ಜೊತೆ ಅನುಭವಿ ಕಲಾವಿದರು ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 20 ವರ್ಷಗಳ ಹಿಂದೆ ಮೈಸೂರು ಭಾಗದಲ್ಲಿ ನಡೆದ ಕಥೆಯನ್ನು ಚಿತ್ರದಲ್ಲಿ ಕಟ್ಟಿಕೊಡಲಾಗಿದೆ.

ಒಂದಷ್ಟು ನೈಜ ಘಟನೆಗಳಿಂದ ಪ್ರೇರಣೆಗೊಂಡು ‘ಮ್ಯಾಂಗೋ ಪಚ್ಚ’ ಸಿನಿಮಾ ಮಾಡಲಾಗಿದೆ. ಈ ಚಿತ್ರದಲ್ಲಿ ಗಾಂಜಾ ದಂಧೆಯ ಚಿತ್ರಣ ಇದೆ. ಮೈಸೂರಿನಲ್ಲಿ ಆಗೆಲ್ಲ ಗಾಂಜಾ ಹೇಗೆಲ್ಲ ಮಾರಾಟ ಆಗ್ತಾ ಇತ್ತು. ಅದನ್ನ ಯುವಕರು ಹೇಗೆಲ್ಲ ರಿಸೀವ್ ಮಾಡುತ್ತಿದ್ದರು ಅನ್ನೋದು ಇದರಲ್ಲಿದೆ. ಆದರೆ, ಇದು ಪ್ರಶಾಂತ್ ಅನ್ನುವ ಯುವಕ ಮುಂದೆ ಮ್ಯಾಂಗೋ ಪಚ್ಚ ಆದ ಅನ್ನೋದರ ಕತೆ ಈ ಚಿತ್ರದಲ್ಲಿದೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಸಂಚಿತ್ ಸಂಜೀವ್ಗೆ ಕಾಜಲ್ ಕುಂದರ್ ನಾಯಕಿಯಾಗಿ ನಟಿಸಿದ್ದಾರೆ. ಇನ್ನುಳಿದಂತೆ ಪ್ರಶಾಂತ್ ಹಿರೇಮಠ್, ಜೈ ಗೋಪಿನಾಥ್, ಹರಿಣಿ ಶ್ರೀಕಾಂತ್, ಉಗ್ರಂ ಮಂಜು, ಮಯೂರ್ ಪಟೇಲ್ ತಾರಾಗಣದಲ್ಲಿದ್ದಾರೆ.
ಇದನ್ನೂ ಓದಿ : ಡಿಕೆಶಿ ಪದಗ್ರಹಣ – ಲೋಕಭವನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್.. 2000ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ!









