ಬೆಂಗಳೂರು : ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್ಗೆ ಡಿಕ್ಕಿ ಹೊಡೆದಿರುವ ಘಟನೆ ನೆಲಮಂಗಲದ ಕುಣಿಗಲ್ ಬೈಪಾಸ್ ಬಳಿ ನಡೆದಿದೆ.
ಹಾಸನ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಆ್ಯಂಬುಲೆನ್ಸ್ ಮಾರ್ಗಮಧ್ಯೆ ಕ್ಯಾಂಟರ್ಗೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಅದೃಷ್ಟವಶಾತ್ ಆ್ಯಂಬುಲೆನ್ಸ್ನಲ್ಲಿದ್ದ ರೋಗಿ ಹಾಗೂ ಚಾಲಕ ಸೇರಿ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಅಪಘಾತದ ನಡೆದ ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದ್ದು, ಆ್ಯಂಬುಲೆನ್ಸ್ನಲ್ಲಿದ್ದ ರೋಗಿಯನ್ನು ಸುರಕ್ಷಿತವಾಗಿ ಬೇರೆ ವಾಹನಕ್ಕೆ ಸ್ಥಳಾಂತರಿಸಿ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಅಪಘಾತದ ತೀವ್ರತೆಗೆ ಆ್ಯಂಬುಲೆನ್ಸ್ ಮುಭಾಂಗ ಸಂಪೂರ್ಣ ಜಖಂ ಆಗಿದ್ದು, ಕ್ಯಾಂಟರ್ಗೂ ಅಲ್ಪ ಪ್ರಮಾಣದ ಡ್ಯಾಮೇಜ್ ಆಗಿದೆ.
ಇದನ್ನೂ ಓದಿ : ಎಸ್ಐಆರ್ ಬಗ್ಗೆ ಎಚ್ಚರವಿರಲಿ, ಇಲ್ಲದಿದ್ದರೆ ಸಮಸ್ಯೆ ತಪ್ಪಿದ್ದಲ್ಲ – ಕಾರ್ಯಕರ್ತರಿಗೆ ಸಿಎಂ ಡಿಕೆಶಿ ಕರೆ!
Author: Btv Kannada
Post Views: 323








