ಬಿಹಾರದ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ – ಮೂವರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ!

ದೆಹಲಿಯ ಮಾಳವೀಯ ನಗರದ ಹೋಟೆಲ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 21 ಮಂದಿ ಸಾವನ್ನಪ್ಪಿದ ಬೆನ್ನಲ್ಲೇ, ಬಿಹಾರದ ಮುಜಫ್ಫರ್‌ಪುರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ.

ಇಂದು ಮುಂಜಾನೆ ಮುಜಫ್ಫರ್‌ಪುರದಲ್ಲಿರುವ ಪ್ರಸಾದ್ ಆಸ್ಪತ್ರೆಯಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಮೂವರು ರೋಗಿಗಳು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವ ಕಾರ್ಯಾಚರಣೆ ನಡೆಸಿದರು. ಜಿಲ್ಲಾ ಆಡಳಿತದ ಅಧಿಕಾರಿಗಳೂ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಹಾಗೂ ಸ್ಥಳಾಂತರ ಕಾರ್ಯಗಳ ಮೇಲ್ವಿಚಾರಣೆ ನಡೆಸಿದರು.

ಪ್ರಾಥಮಿಕ ತನಿಖೆಯಲ್ಲಿ ಆಸ್ಪತ್ರೆಯ ಐದನೇ ಮಹಡಿಯ ಐಸಿಯು (ICU) ವಿಭಾಗದಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ವೇಗವಾಗಿ ಹರಡುತ್ತಿದ್ದಂತೆ ಆಸ್ಪತ್ರೆಯಲ್ಲಿದ್ದ ರೋಗಿಗಳನ್ನು ತುರ್ತಾಗಿ ಹೊರಗೆ ಸ್ಥಳಾಂತರಿಸಲಾಯಿತು.

ಅವಘಡದಲ್ಲಿ ಗಾಯಗೊಂಡ 20ಕ್ಕೂ ಹೆಚ್ಚು ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ನಟಿ ಶುಭಾ ಪೂಂಜಾ-ಸುಮಂತ್ ಡಿವೋರ್ಸ್!

Btv Kannada
Author: Btv Kannada

Leave a Comment

Read More

Read More