ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡದಿದ್ದಕ್ಕೆ ಬೇಸರ – ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!

ಬೆಂಗಳೂರು : ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದ ಬೆನ್ನಲ್ಲೇ, ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನಗೊಂಡು ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡದಿದ್ದಕ್ಕೆ ಹಿರಿಯ ಸಚಿವ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೊಡದೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿದ್ದು, ಇದು ರಾಮಲಿಂಗಾರೆಡ್ಡಿ ಅವರಿಗೆ ಅಸಮಾಧಾನ ಮೂಡಿಸಿದೆ. ಹಾಗಾಗಿ ಇಂದು ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ತಮ್ಮ ಸಚಿವ ಸ್ಥಾನದ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದು ಸಚಿವರುಗಳು ಪ್ರಮಾಣ ವಚನ ಸ್ವೀಕರಿಸಿ ಒಂದು ದಿನ ಕಳೆಯುಷ್ಟರಲ್ಲೇ ಅಸಮಾಧಾನಗಳು ಸ್ಪೋಟಿಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಸಚಿವ ರಾಮಲಿಂಗಾರೆಡ್ಡಿ ಅವರನ್ನು ಸಮಾಧಾನಿಸಿ ಅವರ ಮನವೊಳಿಸಲು ಡಿ.ಕೆ. ಶಿವಕುಮಾರ್ ಪಯತ್ನ ನಡೆಸಿದ್ದಾರೆ. ಆದರೆ ಅದಕ್ಕೆ ಒಪ್ಪದ ಸಚಿವ ರಾಮಲಿಂಗಾರೆಡ್ಡಿ ರಾಜೀನಾಮೆ ಕೊಟ್ಟಿದ್ದಾರೆ.

ಇದನ್ನೂ ಓದಿ : ‘ಕಲರ್ಸ್ ಕನ್ನಡ’ದಿಂದ ಮತ್ತೊಂದು ದೃಶ್ಯ ವೈಭವ – ಜೂ.8ರಿಂದ ಬರ್ತಿದೆ ಹೊಚ್ಚ ಹೊಸ ಕಥೆ ‘ಅಗ್ನಿಸಾಕ್ಷಿ’!

Btv Kannada
Author: Btv Kannada

Leave a Comment

Read More

Read More