ನಟಿ ಶುಭಾ ಪೂಂಜಾ-ಸುಮಂತ್ ಡಿವೋರ್ಸ್!

ಕನ್ನಡ ಚಿತ್ರರಂಗದ ಖ್ಯಾತ ನಟಿ, ಬಿಗ್ ಬಾಸ್ ಖ್ಯಾತಿಯ ಶುಭಾ ಪೂಂಜಾ ಅವರ ವೈವಾಹಿಕ ಬದುಕು ಮದುವೆಯಾದ ನಾಲ್ಕೇ ವರ್ಷಕ್ಕೆ ಮುರಿದು ಬೀಳುವ ಸೂಚನೆ ಸಿಕ್ಕಿದೆ. 

ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಖುಷಿ ಖುಷಿಯಿಂದ ಸಂಸಾರ ನಡೆಸುತ್ತಿದ್ದ ಇವರ ಬಾಳಲ್ಲಿ ಯಾವ ಬಿರುಗಾಳಿ ಬೀಸಿತು ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ.

ಶುಭಾ ಪೂಂಜಾ ಉದ್ಯಮಿ ಸುಮಂತ್ ಬಿಲ್ಲವ ಅವರನ್ನು ಪ್ರೀತಿಸಿ 2022ರ ಜನವರಿಯಲ್ಲಿ ಮದುವೆಯಾಗಿದ್ದರು. ಮದುವೆಯಾದ ಬಳಿಕ ಈ ದಂಪತಿ ಅತ್ಯಂತ ಖುಷಿ ಖುಷಿಯಾಗಿಯೇ ಕಾಲ ಕಳೆದಿದ್ದರು. ಆದರೆ, ಈಗ ಏಕಾಏಕಿ ಬೇರೆ ಆಗಲು ಮುಂದಾಗಿರೋದು ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ.

ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ನೀಡುವಂತೆ ಕೋರಿ ಈ ದಂಪತಿ ನ್ಯಾಯಾಲಯಕ್ಕೆ ಜಂಟಿ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಅರ್ಜಿ ಸಲ್ಲಿಕೆಯಾಗಿದ್ದು, ಮುಂದಿನ ವಿಚಾರಣೆಯ ವೇಳೆ ಶುಭಾ ಪೂಂಜಾ ಮತ್ತು ಸುಮಂತ್ ಇಬ್ಬರೂ ಕೋರ್ಟ್‌ಗೆ ಹಾಜರಾಗುವ ಸಾಧ್ಯತೆ ಇದೆ. ಆದರೆ, ಇಬ್ಬರ ನಡುವಿನ ವಿಚ್ಛೇದನಕ್ಕೆ ನಿಖರವಾದ ಕಾರಣವೇನು ಎಂಬುದನ್ನು ಬಹಿರಂಗಪಡಿಸಲು ಸುಮಂತ್ ನಿರಾಕರಿಸಿದ್ದಾರೆ.

ಇದನ್ನೂ ಓದಿ : ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ – ತಪ್ಪಿದ ಭಾರಿ ದುರಂತ!

Btv Kannada
Author: Btv Kannada

Leave a Comment

Read More

Read More