ಡಿಕೆಶಿ ಸಂಪುಟದಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ? ಇಲ್ಲಿದೆ ಲಿಸ್ಟ್!

ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್‌ ಸಂಪುಟದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಡಿಸಿಎಂ ಡಾ.ಜಿ ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ.

ಸಿಎಂ ಡಿಕೆ ಶಿವಕುಮಾರ್‌ ಹಣಕಾಸು ಖಾತೆಯನ್ನ ತಮ್ಮಲ್ಲೇ ಉಳಿಸಿಕೊಂಡಿದ್ದಾರೆ. ಇದರೊಂದಿಗೆ ಗುಪ್ತಚರ, ಸಹಕಾರ, ಸಿಬ್ಬಂದಿ ಆಡಳಿತ ಸುಧಾರಣೆ ಖಾತೆಯನ್ನೂ ತಾವೇ ಇಟ್ಟುಕೊಂಡಿದ್ದಾರೆ.

ಕರ್ನಾಟಕದ ನೂತನ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್‌ ಅವರಿಗೆ ಕಂದಾಯ ಮತ್ತು ಯುವ ಸಬಲೀಕರಣ ಇಲಾಖೆಯ ಜವಾಬ್ದಾರಿ ಕೊಡಲಾಗಿದೆ. ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಲೋಕೋಪಯೋಗಿ ಇಲಾಖೆಯ ಜವಾಬ್ದಾರಿಯನ್ನು ನೀಡಲಾಗಿದೆ. ಡಿಕೆ ಶಿವಕುಮಾರ್‌ ಸಂಪುಟದ ಮತ್ತೋರ್ವ ಪ್ರಮುಖ ಸಚಿವ ಕೆ.ಜೆ ಜಾರ್ಜ್‌ ಅವರಿಗೆ ಇಂಧನ ಮತ್ತು ಪ್ರವಾಸೋದ್ಯಮ ಖಾತೆ ನೀಡಿದ್ದರೆ, ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಭೈರತಿ ಸುರೇಶ್‌ ಅವರಿಗೆ ಸಾರಿಗೆ ಇಲಾಖೆ ನೀಡಲಾಗಿದೆ.

ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರಿಗೆ ನಗರಾಭಿವೃದ್ಧಿ ಖಾತೆಯನ್ನು ನೀಡಲಾಗಿದೆ. ಆದ್ರೆ ಬೆಂಗಳೂರು ನಗರಾಭಿವೃದ್ಧಿ ಕೇಳಿದ್ದ ರಾಮಲಿಂಗಾರೆಡ್ಡಿ ಅವರಿಗೆ ಜಲಸಂಪನ್ಮೂಲ ಇಲಾಖೆ ನೀಡಲಾಗಿದೆ.

ಯಾರಿಗೆ ಯಾವ ಖಾತೆ?

ಡಿಕೆ ಶಿವಕುಮಾರ್ – ಮುಖ್ಯಮಂತ್ರಿ – ಹಣಕಾಸು, ಗುಪ್ತಚರ, ಸಹಕಾರ, ಸಿಬ್ಬಂದಿ ಆಡಳಿತ ಸುಧಾರಣೆ
ಡಾ. ಜಿ ಪರಮೇಶ್ವರ – ಉಪಮುಖ್ಯಮಂತ್ರಿ – ಕಂದಾಯ, ಯುವ ಸಬಲೀಕರಣ
ಕೃಷ್ಣ ಬೈರೇಗೌಡ – ಬೆಂಗಳೂರು ಅಭಿವೃದ್ದಿ
ಪ್ರಿಯಾಂಕ್ ಖರ್ಗೆ – ಗೃಹ, ಐಟಿಬಿಟಿ
ಡಾ.ಯತೀಂದ್ರ ಸಿದ್ದರಾಮಯ್ಯ – ನಗರಾಭಿವೃದ್ದಿ, ಹಿಂದುಳಿದ ಕಲ್ಯಾಣ
ಯು.ಟಿ ಖಾದರ್ – ಆರೋಗ್ಯ
ಸತೀಶ್ ಜಾರಕಿಹೊಳಿ – ಲೋಕೋಪಯೋಗಿ
ಎಂ.ಬಿ ಪಾಟೀಲ್ – ಬೃಹತ್ ಕೈಗಾರಿಕೆ
ಕೆ.ಜೆ ಜಾರ್ಜ್ – ಇಂಧನ, ಪ್ರವಾಸೋದ್ಯಮ
ಕೆ.ಎಚ್ ಮುನಿಯಪ್ಪ – ಆಹಾರ
ರಾಮಲಿಂಗಾ ರೆಡ್ಡಿ – ಜಲಸಂಪನ್ಮೂಲ
ಈಶ್ವರ್ ಖಂಡ್ರೆ – ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ದಿ
ಬೈರತಿ ಸುರೇಶ್ – ಸಾರಿಗೆ
ಡಾ.ಶರಣ ಪ್ರಕಾಶ್ ಪಾಟೀಲ್ – ವೈದ್ಯಕೀಯ ಶಿಕ್ಷಣ

ಇದನ್ನೂ ಓದಿ : ‘ಮ್ಯಾಂಗೋ ಪಚ್ಚ’ನಿಗಾಗಿ ಒಂದಾದ ಸ್ಯಾಂಡಲ್​ವುಡ್ ಸ್ಟಾರ್ಸ್ – ನಾಳೆ ಸಂಚಿತ್ ಸಂಜೀವ್ ಚಿತ್ರ ಗ್ರ್ಯಾಂಡ್ ರಿಲೀಸ್!

Btv Kannada
Author: Btv Kannada

Leave a Comment

Read More

Read More