ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಚುರುಕುಗೊಂಡಿದ್ದು, ಜೂನ್ 18 ರಂದು ಕರ್ನಾಟಕದ 4 ಸ್ಥಾನಗಳು ಸೇರಿದಂತೆ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಅಧಿಕೃತವಾಗಿ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ.
ವಿಧಾನಸೌಧದಲ್ಲಿರುವ ಚುನಾವಣಾ ಅಧಿಕಾರಿಯ ಕಚೇರಿಗೆ ತೆರಳಿದ ಅವರು, ಮುಂಬರುವ ರಾಜ್ಯಸಭಾ ಚುನಾವಣೆಯ ಅಭ್ಯರ್ಥಿಯಾಗಿ ತಮ್ಮ ನಾಮಪತ್ರ ದಾಖಲೆಗಳನ್ನು ಹಸ್ತಾಂತರಿಸಿದರು.
ಮಲ್ಲಿಕಾರ್ಜುನ ಖರ್ಗೆ ಅವರು ನಾಮಪತ್ರ ಸಲ್ಲಿಸುವ ವೇಳೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಉಪಸ್ಥಿತರಿದ್ದರು.
ಇದನ್ನೂ ಓದಿ : ‘ಮ್ಯಾಂಗೋ ಪಚ್ಚ’ ಗ್ರ್ಯಾಂಡ್ ರಿಲೀಸ್ – ಎಲ್ಲೆಡೆ ಭರ್ಜರಿ ರೆಸ್ಪಾನ್ಸ್.. ಸಂಚಿತ್ ಸಂಜೀವ್ ಮಾಸ್ ಲುಕ್ಗೆ ಫ್ಯಾನ್ಸ್ ಫಿದಾ!
Author: Btv Kannada
Post Views: 570









