ವಾಹನ ಸವಾರರಿಗೆ ಗುಡ್ ನ್ಯೂಸ್ – ಟ್ರಾಫಿಕ್ ಫೈನ್ ಪಾವತಿಗೆ ಮತ್ತೆ 50% ಡಿಸ್ಕೌಂಟ್!

ಬೆಂಗಳೂರು : ರಾಜ್ಯ ಸರ್ಕಾರ ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಮತ್ತೊಮ್ಮೆ ಟ್ರಾಫಿಕ್ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50 ರಷ್ಟು ರಿಯಾಯಿತಿ ಘೋಷಿಸಿ ಆದೇಶ ನೀಡಿದೆ.

ಈ ಹಿಂದೆ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಮ್ಮೆ ರಿಯಾಯಿತಿ ಘೋಷಣೆ ಮಾಡಿದ್ದು, ಜೂನ್ 21 ರಿಂದ ಜುಲೈ 10ರವರೆಗೆ ದಂಡದ ಅರ್ಧದಷ್ಟು ಹಣ ಪಾವತಿಸಲು ವಾಹನ ಸವಾರರಿಗೆ 20 ದಿನಗಳ ಅವಕಾಶ ನೀಡಲಾಗಿದೆ.

ಸಾರಿಗೆ ಇಲಾಖೆಯಲ್ಲಿ 1991 ರಿಂದ 2022ರ ಅವಧಿಯಲ್ಲಿ ಪ್ರಕರಣ ದಾಖಲಾಗಿ ದಂಡ ಬಾಕಿ ಉಳಿಸಿಕೊಂಡಿರುವವರು ಶೇ. 50 ರಷ್ಟು ದಂಡ ಪಾವತಿ ಮಾಡಿ, ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ನೀಡಲಾಗಿದೆ.

ಇನ್ನು ಪೊಲೀಸ್‌ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ಮೇ 2026 ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಮತ್ತೊಮ್ಮೆ ಶೇ. 50 ರಷ್ಟು ರಿಯಾಯಿತಿ ನೀಡಲಾಗಿದೆ. ಬಹಳ ವರ್ಷಗಳಿಂದ ಟ್ರಾಫಿಕ್ ದಂಡ ಕಟ್ಟದೇ ಹಾಗೇ ಬಾಕಿ ಉಳಿಸಿಕೊಂಡವರಿಗೆ ಈ ಆಫರ್ ನೀಡಲಾಗಿದೆ. ಇನ್ನುಳಿದಂತೆ ಮೇ, 2026ರ ನಂತರದ ಕೇಸ್​ಗಳಿಗೆ ಮುಂದಿನ ವರ್ಷ ಆಫರ್ ನೀಡುವ ಸಾಧ್ಯತೆಗಳಿವೆ.

ಇದನ್ನೂ ಓದಿ : ಡಿಕೆಶಿ ಸಂಪುಟದಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ? ಇಲ್ಲಿದೆ ಲಿಸ್ಟ್!

Btv Kannada
Author: Btv Kannada

Leave a Comment

Read More

Read More