ಚಿಕ್ಕೋಡಿ: ಮಳೆ ಅಬ್ಬರಕ್ಕೆ ಬೃಹತ್ ಕಟ್ಟಡವೊಂದು ನೆಲಕ್ಕುರುಳಿರುವ ಘಟನೆ ಚಿಕ್ಕೋಡಿಯ ಅಥಣಿಯಲ್ಲಿ ನಡೆದಿದೆ.
ನಿನ್ನೆ ರಾತ್ರಿ ಸುರಿದ ಮಳೆಗೆ ಅಥಣಿ ಪಟ್ಟಣದ ಹಲ್ಯಾಳ ರಸ್ತೆಯಲ್ಲಿರುವ ಶಿಥಿಲಾವಸ್ಥೆಯ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡ ಬೀಳುವ ಸಂದರ್ಭದಲ್ಲಿ ಯಾರು ಇರದ ಕಾರಣ ದೊಡ್ಡ ಅನಾಹುತ ತಪ್ಪಿದೆ.
ಕಟ್ಟಡ ಬೀಳುವ ದೃಶ್ಯಗಳು ಸ್ಥಳೀಯರ ಮೊಬೈಲಿನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ನಡೆದಿದೆ.
ಇದನ್ನೂ ಓದಿ : ನಮ್ಮ ಕುಟುಂಬದ ಸಮಸ್ಯೆ ನಾವು ಬಗೆಹರಿಸಿಕೊಳ್ಳುತ್ತೇವೆ – ಸಿಎಂ ಡಿ.ಕೆ. ಶಿವಕುಮಾರ್!
Author: Btv Kannada
Post Views: 291








