ಬೆಂಗಳೂರು : ನಮ್ಮ ಕುಟುಂಬದ ಸಮಸ್ಯೆ ನಾವು ಬಗೆಹರಿಸಿಕೊಳ್ಳುತ್ತೇವೆ. ನಾನು ಮುಖ್ಯಮಂತ್ರಿ, ಅವರು (ರಾಮಲಿಂಗಾರೆಡ್ಡಿ) ಸಚಿವರು. ಆದರೂ ನಾವೆಲ್ಲರೂ ಸ್ನೇಹಿತರು. ರಾಮಲಿಂಗಾರೆಡ್ಡಿ ಅವರು ಪಕ್ಷದ ಹಿರಿಯರು, ಬೆಂಗಳೂರಿನಲ್ಲಿ ಪಕ್ಷ ಉಳಿಸುತ್ತಿರುವವರು. ಪಕ್ಷ ಬೆಳೆಸಲು ಕೆಲಸ ಮಾಡುತ್ತಿರುವವರು ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ರಾಮಲಿಂಗಾರೆಡ್ಡಿ ಅವರ ಜೊತೆ ಶುಕ್ರವಾರ ತಡರಾತ್ರಿವರೆಗೂ ಸಮಾಲೋಚನೆ ನಡೆಸಿದ ಬಳಿಕ ಡಿಕೆಶಿ ಮಾತನಾಡಿ, ನಾವು ಖಾತೆ ವಿಚಾರವಾಗಿ ಏನು ಮಾತನಾಡಿದ್ದೇವೆ, ಬೇರೆ ಯಾವ ವಿಚಾರ ಮಾತನಾಡಿದ್ದೇವೆ ಎಂದೆಲ್ಲಾ ಹೇಳಲು ಆಗುತ್ತದೆಯೇ? ಎಂದು ಪ್ರಶ್ನಿಸಿದರು.
ಇಂತಹ ಬೆಳವಣಿಗೆಗಳ ಬಗ್ಗೆ ಕೇಳಿದಾಗ, ಇದೆಲ್ಲಾ ಆಗುತ್ತಾ ಇರಬೇಕು. ಮಳೆ, ಗುಡುಗು, ಸಿಡಿಲು, ಸೂರ್ಯ ಮುಳುಗುವುದು, ಹುಟ್ಟುವುದು ಸಹಜ ಎಂದು ಹೇಳಿದರು.
ರಾಮಲಿಂಗಾರೆಡ್ಡಿ ಅವರು ಪಕ್ಷ ಬಿಟ್ಟು ಹೋಗುತ್ತಾರೆಯೇ? ಹಾಗೆಂದು ಹೇಳಿದ್ದಾರೆಯೇ? ಅವರು ತಮ್ಮ ನೋವನ್ನು ಹೇಳಿಕೊಂಡಿದ್ದಾರೆ. ಒಂದಷ್ಟು ತಪ್ಪು ಸಂವಹನ ಆಗಿದೆ, ಸರಿಪಡಿಸುತ್ತೇವೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಇದನ್ನೂ ಓದಿ : ಇನ್ಮುಂದೆ ಎಲ್ಲಾ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ 10 ಗಂಟೆಯೊಳಗೆ ಕಚೇರಿಯಲ್ಲಿರಬೇಕು – ಸಿಎಂ ಡಿಕೆಶಿ ಖಡಕ್ ಸೂಚನೆ!








