ಭಾರತದ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ಅವರು ನಾರ್ವೆ ಚೆಸ್-2026 ಟೂರ್ನಿಯ ಅಂತಿಮ ಸುತ್ತಿನಲ್ಲಿ ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಪ್ರತಿಷ್ಠಿತ ʻನಾರ್ವೆ ಚೆಸ್ʼ ಪ್ರಶಸ್ತಿ ಮುಡಿಗೇರಿಸಿಕೊಂಡ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಟೂರ್ನಿಯ ಆರಂಭದಲ್ಲಿ ಪ್ರಜ್ಞಾನಂದ ಅವರು 6 ಇತರೆ ಪ್ರಮುಖ ಆಟಗಾರರ ಎದುರು ನಿಧಾನಗತಿಯಲ್ಲಿ ಮುನ್ನಡೆ ಪಡೆದಿದ್ದರು. ಆದರೆ, ದ್ವಿತೀಯಾರ್ಧದಲ್ಲಿ ಉತ್ತಮ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದರು. ನಾರ್ವೆ ಚೆಸ್‌ನಲ್ಲಿ 7 ಬಾರಿ ಚಾಂಪಿಯನ್ ಆಗಿರುವ ಮತ್ತು ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸನ್ ಅವರನ್ನ 2 ಬಾರಿ ಸೋಲಿಸುವ ಮೂಲಕ ಪ್ರಜ್ಞಾನಂದ ಮೇಲುಗೈ ಸಾಧಿಸಿದ್ದರು.
ಅಂತಿಮ ಸುತ್ತಿನಲ್ಲಿ ಗುಕೇಶ್ ಪ್ರಶಸ್ತಿ ಗೆಲ್ಲುವ ರೇಸ್‌ನಿಂದ ಹೊರಬಿದ್ದಾಗ ಪ್ರಜ್ಞಾನಂದ ಅವರು ಚಾಂಪಿಯನ್ ಆಗಿ ಹೊರಹೊಮ್ಮಿ ಭಾರತದ ಕೀರ್ತಿಪತಾಕೆ ಹಾರಿಸಿದ್ದಾರೆ.
ಇದನ್ನೂ ಓದಿ : ಅಥಣಿಯಲ್ಲಿ ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್ ಕಟ್ಟಡ!









