ದೇವನಹಳ್ಳಿ : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ಪೋರ್ಟ್ ಕಸ್ಟಮ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಧಿಕಾರಿಗಳು ದಾಳಿ ನಡೆಸಿ 5ಕೋಟಿ 90 ಲಕ್ಷ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸೀಜ್ ಮಾಡಿದ್ದಾರೆ.
ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಗಾಂಜಾ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಅಧಿಕಾರಿಗಳು 16 ಕೆಜಿಗೂ ಹೆಚ್ಚು ತೂಕದ ಹೈಡ್ರೋಫೋನಿಕ್ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಕಸ್ಟಮ್ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು, ಆರೋಪಿ ವಿರುದ್ಧ NDPS ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ‘ಅಂಬರ ಗುಡ್ಡ’ ಮಕ್ಕಳ ಚಿತ್ರದ ಟ್ರೈಲರ್ ರಿಲೀಸ್ – ಜೂ.26ಕ್ಕೆ ಸಿನಿಮಾ ತೆರೆಗೆ!
Author: Btv Kannada
Post Views: 390








