ನವದೆಹಲಿ : ಕೇಂದ್ರ ಸರ್ಕಾರ ಎಥೆನಾಲ್ ಮಿಶ್ರಿತ ಪೆಟ್ರೋಲ್‌ನ ಆಯ್ದ ಮಾದರಿಗಳ ಮೇಲಿನ ಅಬಕಾರಿ ಸುಂಕವನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ.
ಇ22 (ಎಥೆನಾಲ್ 22% ಮತ್ತು ಪೆಟ್ರೋಲ್ 78% ಮಿಶ್ರಿತ ಇಂಧನ), ಇ25, ಇ27 ಮತ್ತು ಇ30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ತೆಗೆದುಹಾಕಲಾಗಿದೆ. ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಕ್ರಮಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಕೇಂದ್ರ ಸರ್ಕಾರ ಕಳೆದ ಕೆಲವು ವರ್ಷಗಳಿಂದ ಇಥನಾಲ್ ಮಿಶ್ರಿತ ಇಂಧನ ಬಳಕೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ಪೆಟ್ರೋಲ್‌ಗೆ ಇಥನಾಲ್ ಮಿಶ್ರಣ ಮಾಡುವುದರಿಂದ ವಿದೇಶಗಳಿಂದ ಆಮದು ಮಾಡಿಕೊಳ್ಳುವ ಕಚ್ಚಾತೈಲದ ಮೇಲಿನ ಅವಲಂಬನೆ ಕಡಿಮೆಯಾಗುತ್ತದೆ. ಜೊತೆಗೆ ಇಂಧನ ವೆಚ್ಚವನ್ನು ನಿಯಂತ್ರಿಸುವುದರೊಂದಿಗೆ ಪರಿಸರ ಮಾಲಿನ್ಯವನ್ನು ತಗ್ಗಿಸುವಲ್ಲಿಯೂ ಇದು ಪ್ರಮುಖ ಪಾತ್ರ ವಹಿಸುತ್ತದೆ.
ಇದನ್ನೂ ಓದಿ : “ದೊಡ್ಮನ್ಸ” ಚಿತ್ರದ ಪವರ್ ಪ್ಯಾಕ್ಡ್ ಟ್ರೇಲರ್ ರಿಲೀಸ್!
Author: Btv Kannada
Post Views: 380









