ಕರ್ನಾಟಕದಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಅವಿರೋಧ ಆಯ್ಕೆ!

ಬೆಂಗಳೂರು : ಕರ್ನಾಟಕದಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದೆ. ವಿಧಾನಸಭೆಯ ಕಾರ್ಯದರ್ಶಿಯೂ ಆಗಿರುವ ಚುನಾವಣಾಧಿಕಾರಿ ಕೆ.ಎಂ.ವಿಶಾಲಾಕ್ಷಿ ಅವರು ನಾಲ್ಕೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿರುವುದನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್, ಪವನ್ ಖೇರಾ ಹಾಗೂ ಬಿಜೆಪಿ ಅಭ್ಯರ್ಥಿ ನಾಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಯಾವುದೇ ಹೆಚ್ಚುವರಿ ಅಭ್ಯರ್ಥಿಗಳು ಕಣದಲ್ಲಿ ಇಲ್ಲದ ಕಾರಣ ಮತದಾನದ ಪ್ರಕ್ರಿಯೆಯಿಲ್ಲದೆಯೇ ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ ಸಂಸತ್ತಿನ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ : “ನಾಗುಗೆ ವಧು ಬೇಕಾಗಿದೆ” ಚಿತ್ರದ ಹಾಡುಗಳು ಹಾಗೂ ಟ್ರೇಲರ್ ರಿಲೀಸ್!

Btv Kannada
Author: Btv Kannada

Leave a Comment