ಪಶ್ಚಿಮ ಬಂಗಾಳದಲ್ಲಿ ಅಗ್ನಿ ಅವಘಡ – 4,000 ಇವಿಎಂ ಭಸ್ಮ.. ಅವಘಡದ ಹಿಂದೆ ಅಡಗಿದೆಯೇ ರಹಸ್ಯ?

ಕೋಲ್ಕತ್ತಾ : ಪಶ್ಚಿಮ ಬಂಗಾಳದ ದಕ್ಷಿಣ ಕೋಲ್ಕತ್ತಾದ ಅಲಿಪೋರ್‌ನಲ್ಲಿರುವ ಬಹುಮಹಡಿ ಸರ್ಕಾರಿ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಬಳಸಲಾಗಿದ್ದ ಸುಮಾರು 4,000 ಎಲೆಕ್ಟ್ರಾನಿಕ್ ವೋಟಿಂಗ್ ಯಂತ್ರಗಳು ಅಥವಾ ಇವಿಎಂಗಳು ಸುಟ್ಟು ಭಸ್ಮವಾಗಿದೆ.

ಕೋಲ್ಕತ್ತಾದ ಅಲಿಪೋರ್‌ನಲ್ಲಿರುವ ದಕ್ಷಿಣ 24 ಪರಗಣ ಜಿಲ್ಲಾ ಪರಿಷತ್‌ನ 10 ಮಹಡಿಗಳ ಆಡಳಿತಾತ್ಮಕ ಸರ್ಕಾರಿ ಕಟ್ಟಡದಲ್ಲಿ ಜೂನ್ 10ರ ಬುಧವಾರ ಬೆಳಗ್ಗೆ ಸುಮಾರು 9:50ಕ್ಕೆ ಈ ಬೆಂಕಿ ಕಾಣಿಸಿಕೊಂಡಿತ್ತು.

ಈ ದುರ್ಘಟನೆಯಲ್ಲಿ ಕಟ್ಟಡದ 8 ಮತ್ತು 9ನೇ ಮಹಡಿಗಳಲ್ಲಿ ಇರಿಸಲಾಗಿದ್ದ ಸುಮಾರು 4,000 ಇವಿಎಂಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಇವುಗಳನ್ನು ಇತ್ತೀಚಿನ ಬಂಗಾಳ ಚುನಾವಣೆಯ 10 ವಿಧಾನಸಭಾ ಕ್ಷೇತ್ರಗಳಲ್ಲಿ ಬಳಸಲಾಗಿತ್ತು.

ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ರಾಜ್ಯದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಚಿವ ಕೌಶಿಕ್ ಚೌಧರಿ ಅವರು ಸ್ಥಳಕ್ಕೆ ಭೇಟಿ ನೀಡಿ, ಇದು ಸಾಮಾನ್ಯ ಅಗ್ನಿ ಅವಘಡದಂತೆ ಕಾಣಿಸುತ್ತಿಲ್ಲ ಎಂದು ಶಂಕಿಸಿದ್ದಾರೆ.

ಇದನ್ನೂ ಓದಿ : ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್‌ ವಿಜಯ್‌!

Btv Kannada
Author: Btv Kannada

Leave a Comment

Read More