ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್‌ ವಿಜಯ್‌!

ಮಂಗಳೂರು : ತಮಿಳುನಾಡು ಮುಖ್ಯಮಂತ್ರಿ ಜೋಸೆಫ್‌ ವಿಜಯ್‌ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆ ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. 

ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ ಅವರನ್ನು ಸಚಿವ ಯು.ಟಿ.ಖಾದರ್ ಆತ್ಮೀಯವಾಗಿ ಸ್ವಾಗತಿಸಿದರು. ಈ ವೇಳೆ ಸಿಎಂ ವಿಜಯ್ ಅವರಿಗೆ ಸ್ವಾಮಿ ವಿವೇಕಾನಂದರ ಪುಸ್ತಕವನ್ನು ಉಡುಗೊರೆಯಾಗಿ ನೀಡಲಾಯಿತು.

ಇಂದು ಮಧ್ಯಾಹ್ನ 1:40 ರ ಸುಮಾರಿಗೆ ವಿಜಯ್ ಮಂಗಳೂರು ಏರ್‌ಪೋರ್ಟ್‌ಗೆ ಆಗಮಿಸಿದರು. ವಿಮಾನ ನಿಲ್ದಾಣದಿಂದ ಹೊರಬಂದ ವಿಜಯ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಭದ್ರತಾ ದೃಷ್ಟಿಯಿಂದ ವಿಮಾನ ನಿಲ್ದಾಣದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.

ಇದನ್ನೂ ಓದಿ : “ಮಹಾನ್” ಚಿತ್ರದಲ್ಲಿ ಸ್ಯಾಂಡಲ್​ವುಡ್​ನ ಮಹಾನ್ ನಟರ ಅಭಿನಯ!

Btv Kannada
Author: Btv Kannada

Leave a Comment

Read More