ಪರಿಹಾರ ನೀಡದ್ದಕ್ಕೆ ಆಕ್ರೋಶ – ಪ್ರಾಧಿಕಾರದ ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದ ರೈತ!

ಬಾಗಲಕೋಟೆ : ಪರಿಹಾರ ಸಿಗದೆ ಬೇಸತ್ತ ರೈತರೊಬ್ಬರು ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದು ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಕಳೆದ ಒಂದು ವರ್ಷದಿಂದ 15 ಜನ ಸಫಾಯಿ ಕರ್ಮಚಾರಿಗಳಿಗೆ ಸೈಟ್ ಮಂಜೂರು ಮಾಡಿಲ್ಲ ಎಂದು ಆಗ್ರಹಿಸಿ ಡಿಎಸ್‌ಎಸ್‌ (DSS) ಹೋರಾಟಗಾರರು ಬಿಟಿಡಿಎ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದರು. ಈ ಮುತ್ತಿಗೆಯ ವೇಳೆ ಕಚೇರಿಗೆ ಆಗಮಿಸಿದ ರೈತ ಬಸಪ್ಪ ದೊಡಮನಿ ಎಂಬುವವರು ಡಿಎಸ್‌ಎಸ್‌ ಮುಖಂಡರ ಎದುರೇ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. 

ನನ್ನ ಭೂಮಿ ಮುಳುಗಡೆಯಾಗಿ ನಾಲ್ಕು ವರ್ಷಗಳೇ ಕಳೆದರೂ ಬಿಟಿಡಿಎ ಅಧಿಕಾರಿಗಳು ಇನ್ನುವರೆಗೆ ನನಗೆ ಭೂ ಪರಿಹಾರ ನೀಡಿಲ್ಲ. ಪರಿಹಾರಕ್ಕಾಗಿ ಕಚೇರಿಗೆ ಅಲೆದು ಅಲೆದು ಸುಸ್ತಾಗಿದೆ ಎಂದು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತ ಬಸಪ್ಪ ದೊಡಮನಿ ಆಕ್ರೋಶ ಹೊರಹಾಕುತ್ತಿದ್ದಂತೆ, ಅಲ್ಲಿಯೇ ಇದ್ದ ಬಿಟಿಡಿಎ ಹಿರಿಯ ಸಹಾಯಕ ಹಾಗೂ ಟೈಪಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿರುವ ನೀಲಕಂಠ ಅಂಕದ್ ಮತ್ತು ರೈತನ ಮಧ್ಯೆ ತೀವ್ರ ವಾಗ್ವಾದ ನಡೆದಿದೆ. ಆಕ್ರೋಶಗೊಂಡ ರೈತ ಬಸಪ್ಪ ದೊಡಮನಿ ತಮ್ಮ ಕಾಲಲ್ಲಿದ್ದ ಚಪ್ಪಲಿಯನ್ನು ತೆಗೆದುಕೊಂಡು ಟೈಪಿಸ್ಟ್ ನೀಲಕಂಠಗೆ ಎಲ್ಲರ ಎದುರೇ ಹೊಡೆದಿದ್ದಾರೆ.

ಇದನ್ನೂ ಓದಿ : ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಉರುಳಿಗೆ ಸಿಲುಕಿ ಹುಲಿಗೆ ಗಾಯ – ಅಪರಾಧಿಗಳ ವಿರುದ್ಧ ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ದೂರು!

Btv Kannada
Author: Btv Kannada

Leave a Comment

Read More