ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ!

ಉಡುಪಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಗ್ಗೆ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. 

ಶ್ರೀ ಕೃಷ್ಣನ ದರ್ಶನದ ಬಳಿಕ ಸಚಿವರು ಉಡುಪಿಯ ಪ್ರಾಚೀನ ಇತಿಹಾಸ ಪ್ರಸಿದ್ಧ ದೇಗುಲಗಳಾದ ಶ್ರೀ ಅನಂತೇಶ್ವರ ಮತ್ತು ಶ್ರೀ ಚಂದ್ರಮೌಳೀಶ್ವರ ದೇವಸ್ಥಾನಗಳಿಗೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಜಿಲ್ಲೆಯ ವಿವಿಧ ದೇವಾಲಯಗಳಲ್ಲಿ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿಯಾದ ಸಚಿವೆ, ದೇವಸ್ಥಾನ ಆಡಳಿತ ಮಂಡಳಿ ಸದಸ್ಯರು ಹಾಗೂ ಬಿಜೆಪಿ ಮುಖಂಡರೊಂದಿಗೆ ಮಾತುಕತೆ ನಡೆಸಿದರು.

ಇದನ್ನೂ ಓದಿ : ಭಾರತೀಯ ವಾಯುಪಡೆಯ AN-32 ವಿಮಾನ ಪತನ!

Btv Kannada
Author: Btv Kannada

Leave a Comment

Read More