ಕರ್ನಾಟಕ ಹೈಕೋರ್ಟ್‌ಗೆ 6 ಹೊಸ ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ..!

ಬೆಂಗಳೂರು : ಕರ್ನಾಟಕ ಹೈಕೋರ್ಟ್‌ಗೆ ಆರು ಮಂದಿ ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.

ಸಂವಿಧಾನದ 224(1)ನೇ ವಿಧಿಯಡಿ ಈ ನೇಮಕಾತಿ ನಡೆದಿದ್ದು, ಅಧಿಕಾರ ಸ್ವೀಕರಿಸಿದ ದಿನದಿಂದ ಎರಡು ವರ್ಷಗಳ ಕಾಲ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಲಿದ್ದಾರೆ.

ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ರಾಘವೇಂದ್ರ ಸೀತಾರಾಮ ಶ್ರೀವತ್ಸ, ಹೇಮಾ ಕುಲಕರ್ಣಿ, ಸುಬ್ರಮಣ್ಯ ರಂಗರಾವ್, ತಡಗವಾಡಿ ಪ್ರಕಾಶ್ ವಿವೇಕಾನಂದ, ಬಕ್ಕೇಶ್ವರ ಪ್ರಮೋದ್ ಹಾಗೂ ಹೊಂಬೆ ಗೌಡ ಶಾಂತಿ ಭೂಷಣ್ ಅವರನ್ನು ನೇಮಕ ಮಾಡಲಾಗಿದೆ.

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಈ ಕುರಿತು ಅಧಿಸೂಚನೆ ಪ್ರಕಟಿಸಿದ್ದು, ಈ ಹಿಂದೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಈ ಆರು ಮಂದಿಯ ಹೆಸರುಗಳನ್ನು ಶಿಫಾರಸು ಮಾಡಿತ್ತು.

ಕೊಲಿಜಿಯಂ ಶಿಫಾರಸಿಗೆ ಕೇಂದ್ರ ಸರ್ಕಾರದ ಅನುಮೋದನೆ ದೊರೆತ ಬಳಿಕ ರಾಷ್ಟ್ರಪತಿಗಳು ನೇಮಕಾತಿಗೆ ಅಧಿಕೃತ ಮುದ್ರೆ ಒತ್ತಿದ್ದಾರೆ.!

Btv Kannada
Author: Btv Kannada

Leave a Comment

Read More

Read More