Download Our App

Follow us

Home » ರಾಜಕೀಯ » 3-4 ಸಾವಿರ ಸೈಟ್​ಗಳ ಅಕ್ರಮ ಆಗಿದೆ, ED ಯಾವ ದಾಖಲೆ ಸಂಗ್ರಹ ಮಾಡುತ್ತೆ ನೋಡೋಣ – ಆರ್​​.ಅಶೋಕ್..!

3-4 ಸಾವಿರ ಸೈಟ್​ಗಳ ಅಕ್ರಮ ಆಗಿದೆ, ED ಯಾವ ದಾಖಲೆ ಸಂಗ್ರಹ ಮಾಡುತ್ತೆ ನೋಡೋಣ – ಆರ್​​.ಅಶೋಕ್..!

ಮೈಸೂರು: ರಾಜ್ಯವ್ಯಾಪಿ ಭಾರೀ ಸದ್ದು ಮಾಡಿದ್ದ ಮುಡಾ ಹಗರಣದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ED) ಮೈಸೂರಿನಲ್ಲಿರುವ ಮುಡಾ ಕಛೇರಿ ಮೇಲೆ ಏಕಾಏಕಿ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ. 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು ಎಂದು ವಿಪಕ್ಷ ನಾಯಕ ಆರ್‌.ಅಶೋಕ್​​ ಹೇಳಿದರು.

ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್‌.ಅಶೋಕ್ ಅವರು, ಮುಡಾದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರದ್ದೂ ಸೇರಿದಂತೆ ಸುಮಾರು 1,200ಕ್ಕೂ ಅಧಿಕ ನಿವೇಶನಗಳ ಹಗರಣ ನಡೆದಿದೆ ಎಂಬ ದೂರು ಬಂದಿದ್ದು, ಅದಕ್ಕಾಗಿ ದಾಳಿ ಮಾಡಲಾಗಿದೆ. 3-4 ಸಾವಿರ ಕೋಟಿ ರೂ. ಹಗರಣ ನಡೆದಿದೆ ಎಂದು ಮುಡಾ ಅಧ್ಯಕ್ಷರಾಗಿದ್ದ, ಕಾಂಗ್ರೆಸ್‌ನವರೇ ಆದ ಮರಿಗೌಡ ಪತ್ರದಲ್ಲಿ ತಿಳಿಸಿದ್ದರು. ಅದಾದ ಬಳಿಕ ಸ್ನೇಹಮಯಿ ಕೃಷ್ಣ ಇಡಿಗೆ ದೂರು ನೀಡಿದ್ದಾರೆ. ಇದರಲ್ಲಿ ರಾಜಕೀಯದ ಪ್ರಶ್ನೆ ಉದ್ಭವವೇ ಆಗುವುದಿಲ್ಲ. ಇದರಲ್ಲಿ ಬಿಜೆಪಿ ಅಥವಾ ಕೇಂದ್ರ ಸರ್ಕಾರದ ಪಾತ್ರವೇ ಇಲ್ಲ ಎಂದರು.

ಇದನ್ನು ರಾಜಕೀಯವಾಗಿ ನೋಡಬಾರದು. ನಿವೇಶನಗಳು ವಾಪಸ್‌ ಸಿಕ್ಕರೆ ಹಾಗೂ ಹಣ ಸಿಕ್ಕರೆ ರಾಜ್ಯ ಸರ್ಕಾರಕ್ಕೆ ಲಾಭವಾಗುತ್ತದೆ. ಸರ್ಕಾರದಲ್ಲಿ ಖಜಾನೆ ಖಾಲಿಯಾಗಿ ಸಂಬಳ ಕೊಡಲಾಗದ ಪರಿಸ್ಥಿತಿ ಇದೆ. ಇಂತಹ ಸ್ಥಿತಿಯಲ್ಲಿ ಖಜಾನೆಗೆ ಹಣ ಬಂದರೆ ಒಳ್ಳೆಯದು. ಇದನ್ನು ಕಾಂಗ್ರೆಸ್‌ನವರು ಸ್ವಾಗತಿಸಬೇಕು. ಇದನ್ನು ರಾಜಕಾರಣ ಎನ್ನಲು ಬಿಜೆಪಿ ನಾಯಕರೇನೂ ದೂರು ನೀಡಿಲ್ಲ ಎಂದರು.

ಅಕ್ರಮ ಹಣ ವರ್ಗಾವಣೆಯಾಗಿಲ್ಲ ಎಂದಾದರೆ 3-4 ಸಾವಿರ ಕೋಟಿ ರೂ. ಹಣದ ಅಕ್ರಮ ನಡೆದಿರುವುದು ಹೇಗೆ? ನಿವೇಶನ ಮಂಜೂರಾಗಿದೆ ಎಂದಮೇಲೆ ಅದರ ಹಣ ಯಾರಿಗಾದರೂ ಸಿಕ್ಕೇ ಸಿಕ್ಕಿರುತ್ತದೆ. ಅದಕ್ಕೆ ನಗದಿನಲ್ಲಿ ಹಣ ನೀಡಲಾಗಿರುತ್ತದೆ. ಅಂತಹ ನಗದು ಕಪ್ಪು ಹಣವೇ ಆಗಿರುತ್ತದೆ. ಇಡಿ ಬಗ್ಗೆ ಪ್ರಶ್ನೆ ಮಾಡುವವರು ಕೋರ್ಟ್‌ನಲ್ಲಿ ಪ್ರಶ್ನೆ ಮಾಡಬಹುದಿತ್ತು. ಆದರೆ ಸಿಎಂ ಸಿದ್ದರಾಮಯ್ಯನವರು ಕೋರ್ಟ್‌ಗೆ ಹೋಗಲೇ ಇಲ್ಲ. ಇಡಿಗೆ ಅಧಿಕಾರ ಇಲ್ಲವೆಂದಾದರೆ ಎಸ್‌ಐಟಿ ಮಾಡಲು ಸರ್ಕಾರಕ್ಕೆ ಅಧಿಕಾರವಿದೆಯೇ ಎಂದು ಪ್ರಶ್ನಿಸಬೇಕಾಗುತ್ತದೆ ಎಂದರು.

ಇನ್ನು ಮುಂದಿನ ಹೋರಾಟದ ಬಗ್ಗೆ ನಾವೆಲ್ಲಾ ಸೇರಿ ಚರ್ಚಿಸುತ್ತೇವೆ. ಸಿದ್ದರಾಮಯ್ಯನವರ ರಾಜಿನಾಮೆ ಈಗ ಕೇಳಲ್ಲ. ED ಯಾವ ದಾಖಲೆ ಸಂಗ್ರಹ ಮಾಡುತ್ತೆ ನೋಡೋಣ ಎಂದು ಬೆಂಗಳೂರಲ್ಲಿ ವಿಪಕ್ಷ ನಾಯಕ ಆರ್​​.ಅಶೋಕ್ ತಿಳಿಸಿದ್ದಾರೆ.

ಇದನ್ನೂ ಓದಿ : ನಾನು ಮುಡಾ ಫೈಲ್​​​ಗಳನ್ನು ತಂದಿಲ್ಲ, ದೇವರ ಮುಂದೆ ಆಣೆ ಮಾಡೋಕೆ ನಾನ್​ ರೆಡಿ – ಸಚಿವ ಭೈರತಿ ಸುರೇಶ್..!

Leave a Comment

DG Ad

RELATED LATEST NEWS

Top Headlines

ದಿಢೀರ್ ಬಿಗ್​ಬಾಸ್​ ಮನೆಯಿಂದ ಹೊರ ಬಂದ ಚೈತ್ರಾ ಕುಂದಾಪುರ.. ಕಾರಣವೇನು?

ಬೆಂಗಳೂರು : ಕನ್ನಡ ‘ಬಿಗ್​​ಬಾಸ್ ಸೀಸನ್​ 11’ರಲ್ಲಿ ಮನೆಯೊಳಗೆ ಸಖತ್ ಸೌಂಡ್ ಮಾಡುತ್ತಿರುವ ಸ್ಪರ್ಧಿ ಚೈತ್ರಾ ಕುಂದಾಪುರ ಅವರು ದಿಢೀರ್ ಬಿಗ್​ಬಾಸ್ ಮನೆಯಿಂದ  ​ಹೊರಗೆ ಬಂದಿದ್ದಾರೆ. ಶಾಕಿಂಗ್

Live Cricket

Add Your Heading Text Here