Download Our App

Follow us

Home » ಜಿಲ್ಲೆ » ಶ್ರೀ ಗುರುರಾಯರ 353ನೇ ಆರಾಧನಾ ಮಹೋತ್ಸವ – ಇಷ್ಟಾರ್ಥ ಸಿದ್ಧಿಗಾಗಿ ಮಂತ್ರಾಲಯಕ್ಕೆ ಹರಿದು ಬಂದ ಭಕ್ತ ಸಾಗರ..!

ಶ್ರೀ ಗುರುರಾಯರ 353ನೇ ಆರಾಧನಾ ಮಹೋತ್ಸವ – ಇಷ್ಟಾರ್ಥ ಸಿದ್ಧಿಗಾಗಿ ಮಂತ್ರಾಲಯಕ್ಕೆ ಹರಿದು ಬಂದ ಭಕ್ತ ಸಾಗರ..!

ಮಂತ್ರಾಲಯದಲ್ಲಿ ಸಪ್ತರಾತ್ರೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತಿದೆ. ಲಕ್ಷೋಪಲಕ್ಷ ಸಂಖ್ಯೆಯಲ್ಲಿ ಭಕ್ತರ ದಂಡೇ ರಾಯರ ಸನ್ನಿಧಾನಕ್ಕೆ ಹರಿದು ಬಂದಿದೆ. ಶ್ರೀಗುರು ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ಪ್ರಯುಕ್ತ ಮಂತ್ರಾಲಯದಲ್ಲಿ ಸಪ್ತರಾತ್ರೋತ್ಸವಕ್ಕೆ ಭಾನುವಾರ ಚಾಲನೆ ಸಿಕ್ಕಿದ್ದು, ಪೀಠಾಧಿಪತಿ ಸುಬುಧೇಂದ್ರ ತೀರ್ಥರು ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ, ಗೋ ಪೂಜೆ, ಅಶ್ವಪೂಜೆ, ಧಾನ್ಯ ಪೂಜೆ ನೆರವೇರಿಸಿದ್ದಾರೆ.

ಆಗಸ್ಟ್ 18ರಂದು ಆರಂಭವಾಗಿದ್ದ ಕಾರ್ಯಕ್ರಮಗಳು ಆ.24ರವರೆಗೆ ನಡೆಯಲಿದೆ. ಶ್ರೀ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ಸಪ್ತರಾತ್ರೋತ್ಸವದ ಪ್ರತಿ ದಿನ ಸಂಜೆ ಧಾರ್ಮಿಕ, ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಶ್ರೀ ಮಠ ಹಾಗೂ ಆವರಣವನ್ನು ಸುಣ್ಣ ಬಣ್ಣ, ಹೂಗಳಿಂದ ಅಲಂಕರಿಸಲಾಗಿದೆ. ಪರಿಮಳ ಪ್ರಸಾದ ವಿತರಣೆ ಮಾಡಲಾಗ್ತಿದೆ.

ನಿನ್ನೆ ಮಠದ ಪ್ರಾಂಗಣದಲ್ಲಿ ರಾಯರು ರಚಿಸಿರುವ ಪರಿಮಳ ಗ್ರಂಥವನ್ನ ಪಲ್ಲಕ್ಕಿಯಲ್ಲಿ ಇಟ್ಟು ಉತ್ಸವ ನೆರವೇರಿಸಲಾಯಿತು. ತಮಿಳುನಾಡಿನ ಶ್ರೀರಂಗಂನ ರಂಗನಾಥಸ್ವಾಮಿ ದೇವಾಲಯದಿಂದ ಬಂದ ಶೇಷವಸ್ತ್ರವನ್ನ ಅದ್ದೂರಿಯಾಗಿ ಸ್ವಾಗತಿಸಿ ರಾಯರಿಗೆ ಶೇಷವಸ್ತ್ರ ಸಮರ್ಪಿಸಲಾಯಿತು. ಇನ್ನು ಸಾವಿರಾರು ಸಂಖ್ಯೆಯಲ್ಲಿ ರಾಯರ ಸೇವೆಗೆ ಸ್ವಯಂ ಸೇವಕರು ಆಗಮಿಸಿದ್ದು, ಆರಾಧನೆ ವೇಳೆ ಎಲ್ಲ ಭಕ್ತರಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಒತ್ತು ಕೊಡಲಾಗಿದೆ.

ರಾಯರು 700 ವರ್ಷಕಾಲ ವೃಂದಾವನದಲ್ಲಿರುತ್ತಾರೆ ಅನ್ನೋ ಪ್ರತೀತಿಯಿದೆ. ಈ ಹಿನ್ನೆಲೆ ಪ್ರತಿ ವರ್ಷ ಪೂರ್ವಾರಾಧನೆ ಸಮಯದಲ್ಲಿ ವಿಶೇಷ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಮಂತ್ರಾಲಯದಲ್ಲಿ ನಡೆಯುತ್ತವೆ.

ಬೆಳಗ್ಗೆಯಿಂದಲೇ ಮಠದಲ್ಲಿ ಪೂಜಾ ಕೈಂಕರ್ಯಗಳು ನಡೆಯುವುದರ ಜೊತೆಗೆ, ನಿರ್ಮಾಲ್ಯ ವಿಸರ್ಜನೆ, ಉತ್ಸವರಾಯರ ಪಾದಪೂಜೆ, ಪಂಚಾಮೃತ ಅಭಿಷೇಕ, ರಜತ ಸಿಂಹವಾಹನೋತ್ಸವ ಕಾರ್ಯಕ್ರಮ ನಡೆಯುತ್ತಿವೆ

ರಾಯರ ಏಳು ದಿನಗಳ ಆರಾಧನಾ ಮಹೋತ್ಸವದಲ್ಲಿ ‌ಪೂರ್ವಾರಾಧನೆ, ಮಧ್ಯಾರಾಧನೆ ಹಾಗೂ ಉತ್ತರಾಧನೆ ಈ ಮೂರು ದಿನಗಳು‌ ಅತಿ ಮಹತ್ವವಾಗಿವೆ. ರಾಘವೇಂದ್ರ ಸ್ವಾಮಿಗಳು ವೃಂದಾವನಸ್ಥರಾಗಿರುವ ಈ ದಿನಗಳಲ್ಲಿ ರಾಯರ ದರ್ಶನ ಪಡೆದರೆ ಸಕಲ ಸಂಕಷ್ಟಗಳು ದೂರಾಗುತ್ತವೆ ಎಂಬ ನಂಬಿಕೆ ಭಕ್ತರದ್ದಾಗಿದೆ. ಹೀಗಾಗಿ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು, ಭಜನಾ ಮಂಡಳಿಗಳು ಆಗಮಿಸಿ ರಾಯರಿಗೆ ಭಕ್ತಿಯ ಸೇವೆಯನ್ನು ಸಮರ್ಪಿಸುತ್ತಿದ್ದಾರೆ.

ಸಂಜೆ ವೇಳೆ ಮಠದ ಪ್ರಾಂಗಣದಲ್ಲಿ ವಿವಿಧ ಸಾಂಸ್ಕೃತಿಕ‌ ಕಾರ್ಯಕ್ರಮಗಳು ಜೊತೆಗೆ ವಿವಿಧ ಕ್ಷೇತ್ರದಲ್ಲಿ ಸೇವೆಗೈದ ಮಹನಿಯರಿಗೆ ರಾಘವೇಂದ್ರ ಅನುಗ್ರಹ ಪ್ರಶಸ್ತಿ ನೀಡಿ ಸತ್ಕರಿಸಲಾಗುತ್ತಿದೆ. ಒಟ್ಟಾರೆ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸಪ್ತರಾತ್ರೋತ್ಸವ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಭಕ್ತರು ಸಹ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ರಾಯರ ಮೊರೆ ಹೋಗಿದ್ದಾರೆ.

ಇದನ್ನೂ ಓದಿ : ಪ್ರಾಸಿಕ್ಯೂಷನ್​​ ಟೆನ್ಷನ್​​.. ಕಾನೂನು ತಜ್ಞರ ಮೊರೆ ಹೋದ ಹೆಚ್​ಡಿಕೆ..!

Leave a Comment

DG Ad

RELATED LATEST NEWS

Top Headlines

BBK11: ‘ನಿಮ್ಮ ರೀತಿಯ ಫೂಟೇಜ್ ನನಗೆ ಬೇಡ’ – ಮೋಕ್ಷಿತಾ ಖಡಕ್​ ಮಾತಿಗೆ ಜಗದೀಶ್ ಪುಲ್​ ಸೈಲೆಂಟ್..!

ಬಿಗ್‌ ಬಾಸ್‌ ಮನೆ ಈಗ ರಣರಂಗವಾಗಿದ್ದು, ಎರಡನೇ ವಾರಕ್ಕೆ ಕಾಲಿಟ್ಟಿದೆ. 16 ಸ್ಪರ್ಧಿಗಳ ಮಧ್ಯೆ ಒಂಟಿ ಮನೆಯಲ್ಲಿ ಆಟ ಮುಂದುವರಿದಿದೆ. ಮೊದಲ ವಾರ ಯಮುನಾ ಶ್ರೀನಿಧಿ ಎಲಿಮಿನೇಟ್

Live Cricket

Add Your Heading Text Here