Download Our App

Follow us

Home » ರಾಜಕೀಯ » ಬಜೆಟ್​​ನಲ್ಲಿ ಮಹಿಳೆಯರು, ಬಾಲಕಿಯರಿಗೆ 3 ಲಕ್ಷ ಕೋಟಿಗೂ ಹೆಚ್ಚು ಹಣ ಮೀಸಲು..!

ಬಜೆಟ್​​ನಲ್ಲಿ ಮಹಿಳೆಯರು, ಬಾಲಕಿಯರಿಗೆ 3 ಲಕ್ಷ ಕೋಟಿಗೂ ಹೆಚ್ಚು ಹಣ ಮೀಸಲು..!

ನವದೆಹಲಿ : ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ದಾಖಲೆಯ 7ನೇ ಬಜೆಟ್‌ ಮಂಡಿಸಿದ್ದಾರೆ. ಈ ವೇಳೆ ದೇಶದ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಮಹಿಳೆಯರು ಮತ್ತು ಬಾಲಕಿಯರಿಗೆ ಸಂಬಂಧಿಸಿದ ಯೋಜನೆಗಳಿಗಾಗಿ 3 ಲಕ್ಷ ಕೋಟಿ ರೂ.ಗೂ ಹೆಚ್ಚು ಹಣವನ್ನು ಮೀಸಲಿಟ್ಟಿದ್ದಾರೆ.

ತಮ್ಮ ಬಜೆಟ್​ನಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಹಿಳಾ ವಲಯಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ಆರ್ಥಿಕ ಅಭಿವೃದ್ಧಿಯಲ್ಲಿ ತಮ್ಮ ಪಾತ್ರವನ್ನು ಹೆಚ್ಚಿಸಲು ಹೆಣ್ಣುಮಕ್ಕಳು ಮತ್ತು ಮಹಿಳೆಯರಿಗೆ ಲಾಭದಾಯಕ ಯೋಜನೆಗಳಿಗಾಗಿ ಬಜೆಟ್​ನಲ್ಲಿ 3 ಲಕ್ಷ ಕೋಟಿಗೂ ಹೆಚ್ಚು ಹಣವನ್ನು ಮೀಸಲಿಡಲಾಗಿದೆ. ಉದ್ಯೋಗಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಸರ್ಕಾರವು ಮಹಿಳಾ ವಸತಿ ನಿಲಯಗಳನ್ನು ಸ್ಥಾಪಿಸುತ್ತದೆ ಎಂದು ಬಜೆಟ್​ನಲ್ಲಿ ಘೋಷಿಸಲಾಗಿದೆ.

2024-25ರ ಕೇಂದ್ರ ಬಜೆಟ್‌ನಲ್ಲಿ ಮಹಿಳೆಯರು ಮತ್ತು ಬಾಲಕಿಯರಿಗೆ 3 ಲಕ್ಷ ಕೋಟಿ ರೂ. ಮೊತ್ತದ ಯೋಜನೆಗಳನ್ನು ಒದಗಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಘೋಷಿಸಿದರು. ಉದ್ಯೋಗಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ದುಡಿಯುವ ಮಹಿಳೆಯರಿಗೆ ಹಾಸ್ಟೆಲ್​ಗಳನ್ನು ನಿರ್ಮಿಸಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

  • ಆಸ್ತಿಯಿಂದ ಉದ್ಯೋಗದವರೆಗೂ ಸ್ವಾವಲಂಬಿ ಕಲ್ಪನೆ
  • ಮಹಿಳೆ, ಬಾಲಕಿಯರಿಗೆ 3 ಲಕ್ಷ ಕೋಟಿಗೂ ಹೆಚ್ಚು ಹಣ ಮೀಸಲು
  • ದುಡಿಯುವ ಮಹಿಳೆಯರಿಗೆ ಹಾಸ್ಟೆಲ್​ ಸೌಲಭ್ಯ
  • ಸರ್ಕಾರವು ವರ್ಕಿಂಗ್ ವುಮನ್ ಹಾಸ್ಟೆಲ್‌ ಸ್ಥಾಪನೆ ಮಾಡಲಿದೆ
  • ಭೂ ನೋಂದಣಿ, ಮಾಲೀಕತ್ವದಲ್ಲಿ ಮಹಿಳೆಗೆ ಆದ್ಯತೆ
  • ಮನೆ, ಆಸ್ತಿ ವಿಚಾರದಲ್ಲಿ ಮಹಿಳಾ ಮಾಲಿಕತ್ವಕ್ಕೆ ಕೆಲ ವಿನಾಯ್ತಿ

ಇದನ್ನೂ ಓದಿ : ಬಜೆಟ್ 2024 – ಉದ್ಯೋಗ ಕ್ಷೇತ್ರದ ಉತ್ತೇಜನಕ್ಕೆ 3 ಹೊಸ ಯೋಜನೆ..!

Leave a Comment

DG Ad

RELATED LATEST NEWS

Top Headlines

‘ದಾಸ’ನಿಗೆ ಬಿಟ್ಟು ಬಿಡದ ಬೆನ್ನು ಬೇನೆ – ಸಂಕ್ರಾಂತಿ ಹಬ್ಬಕ್ಕೆ ಆಪರೇಷನ್?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಅವರು ಈಗ ಜಾಮೀನು ಪಡೆದು ಹೊರ ಬಂದಿದ್ದಾರೆ. ಅವರಿಗೆ ಬೆನ್ನು ನೋವು ಅತಿಯಾಗಿ ಕಾಡಿತ್ತು.

Live Cricket

Add Your Heading Text Here