ಬೆಂಗಳೂರು : ಲೋಕಸಭೆ ಚುನಾವಣೆಕ್ಕಿಂತ ಮೊದಲು ನಡೆಯುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯಾಗಿದೆ. 4 ರಾಜ್ಯಗಳ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.
ರಾಜಸ್ಥಾನದಿಂದ ಸೋನಿಯಾ ಗಾಂಧಿ ಮತ್ತು ಹಿಮಾಚಲದಿಂದ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಟಿಕೆಟ್ ನೀಡಲಾಗಿದೆ. ಹಾಗೆಯೇ ಬಿಹಾರದಿಂದ ಅಖಿಲೇಶ್ ಪ್ರಸಾದ್ ಸಿಂಗ್ ಮತ್ತು ಮಹಾರಾಷ್ಟ್ರದಿಂದ ಚಂದ್ರಕಾಂತ್ ಹಂದೋರೆ ಹೆಸರನ್ನು ಪ್ರಕಟಿಸಲಾಗಿದೆ.
ಕರ್ನಾಟಕದಿಂದ ರಘುರಾಂ ರಾಜನ್ ಸ್ಪರ್ಧಿಸುವ ಸಾಧ್ಯತೆಯಿದೆ. ಮಧ್ಯಪ್ರದೇಶದಲ್ಲಿ ಒಂದು, ತೆಲಂಗಾಣದಲ್ಲಿ ಎರಡು ಮತ್ತು ಕರ್ನಾಟಕದಲ್ಲಿ ಮೂರು ಅಭ್ಯರ್ಥಿಗಳ ಹೆಸರನ್ನೂ ಇನ್ನೂ ಘೋಷಣೆ ಮಾಡಿಲ್ಲ. ಸೋನಿಯಾಗಾಂಧಿ ರಾಜಸ್ಥಾನದಿಂದ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.
ಇದನ್ನೂ ಓದಿ : ಬೆಂಗಳೂರು : ಒಂದೇ ಸ್ಕ್ರೀನ್ ಶಾಟ್ ಇಟ್ಕೊಂಡು ಹತ್ತಾರು ಜನರಿಗೆ ವಂಚಿಸಿದ ಖತರ್ನಾಕ್ OLA ಡ್ರೈವರ್..!
Post Views: 308