Download Our App

Follow us

Home » ರಾಜ್ಯ » ಸಿಲಿಕಾನ್‌ ಸಿಟಿಯಲ್ಲಿ ನೀರಿಗಾಗಿ ಹಾಹಾಕಾರ – ಈ ಉದ್ದೇಶಗಳಿಗೆ ಕುಡಿಯುವ ನೀರು ಬಳಸಿದರೆ 5000 ರೂ. ದಂಡ ಫಿಕ್ಸ್..!

ಸಿಲಿಕಾನ್‌ ಸಿಟಿಯಲ್ಲಿ ನೀರಿಗಾಗಿ ಹಾಹಾಕಾರ – ಈ ಉದ್ದೇಶಗಳಿಗೆ ಕುಡಿಯುವ ನೀರು ಬಳಸಿದರೆ 5000 ರೂ. ದಂಡ ಫಿಕ್ಸ್..!

ಬೆಂಗಳೂರು : ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡುವುದನ್ನು ನಿಷೇಧಿಸಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆದೇಶ ಹೊರಡಿಸಿದೆ. ನಗರದಲ್ಲಿ ದಿನದಿಂದ ದಿನಕ್ಕೆ ನೀರಿನ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕುಡಿಯುವ ನೀರನ್ನು ಇತರೆ ಉದ್ದೇಶಗಳಿಗೆ ಬಳಸುವುದನ್ನು ನಿಷೇಧಿಸಿದ್ದು, ನಿಯಮ ಉಲ್ಲಂಘನೆಯಾದರೆ 5 ಸಾವಿರ ದಂಡ ವಿಧಿಸುವುದಾಗಿ ಹೇಳಿದೆ.

ಮಳೆ ಕೊರತೆ ಮತ್ತು ಹೆಚ್ಚುತ್ತಿರುವ ತಾಪಮಾನದಿಂದಾಗಿ ನಗರದಲ್ಲಿ ನೀರಿನ ಸಮಸ್ಯೆ ತಲೆದೋರುತ್ತಲೇ ಇದೆ. ಹೀಗಾಗಿ, ಕಾರು ತೊಳೆಯಲು, ಕೈದೋಟ, ನಿರ್ಮಾಣ ಕಾಮಗಾರಿ, ನೀರಿನ ಕಾರಂಜಿ ಮತ್ತು ರಸ್ತೆ ನಿರ್ಮಾಣ ಮತ್ತು ನಿರ್ವಹಣೆಗೆ ಕುಡಿಯುವ ನೀರಿನ ಬಳಕೆಯನ್ನು ನಿಷೇಧಿಸಿದೆ. ಈ ಆದೇಶ ಉಲ್ಲಂಘಿಸಿದರೆ 5,000 ರೂಪಾಯಿ ದಂಡವನ್ನೂ ವಿಧಿಸಿದೆ.

ಒಂದ್ವೇಳೆ, ನಿಯಮ ಉಲ್ಲಂಘನೆ ಮರುಕಳಿಸಿದಲ್ಲಿ ದಂಡದ ಮೊತ್ತ 5000 ರೂಪಾಯಿ ಜೊತೆಗೆ ಹೆಚ್ಚುವರಿಯಾಗಿ 500 ರೂಪಾಯಿ ಪ್ರತಿ ದಿನದಂತೆ ದಂಡ ವಿಧಿಸಲು BWSSB ಮುಂದಾಗಿದೆ.

ಇದನ್ನೂ ಓದಿ : ಲೋಕಸಭಾ ಚುನಾವಣೆ : ಕರ್ನಾಟಕದ 7 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here