ರಾಮನಗರ : ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಮದುವೆ ಸಮಾರಂಭದಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಸಾತನೂರು ಸರ್ಕಲ್ ಬಳಿ ಮದುವೆ ಸಮಾರಂಭ ನಡೆಯುತ್ತಿತ್ತು. ಊಟದ ನಂತರ ಐಸ್ ಕ್ರೀಂ ತಿಂದ ಅರ್ಧ ಗಂಟೆಯಲ್ಲೇ ಸುಮಾರು ಜನರಿಗೆ ವಾಂತಿ, ಬೇಧಿ ಶುರುವಾಗಿದೆ.
ಅಸ್ವಸ್ಥರೆಲ್ಲಾ ಚನ್ನಪಟ್ಟಣದ ಯಾರಬ್ ನಗರ ಹಾಗೂ ಕೋಟೆ ನಿವಾಸಿಗಳು. ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ 40 ಮಂದಿ, ಉಳಿದವರನ್ನು ಮಂಡ್ಯ ಹಾಗೂ ರಾಮನಗರ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಸಮಾರಂಭದಲ್ಲಿ ಅವಧಿ ಮೀರಿದ ಐಸ್ಕ್ರೀಂ ನೀಡಿರುವ ಆರೋಪ ಕೇಳಿಬಂದಿದೆ. ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಇದನ್ನೂ ಓದಿ : ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ : ಹೆಚ್.ಡಿ ರೇವಣ್ಣ..!
Post Views: 284