ಬೆಂಗಳೂರು : ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲೇ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮುಂಡಗಾರು ಲತಾ, ಸುಂದ್ರಿ ಕೊತ್ಲೂರು, ವನಜಾಕ್ಷಿ ಬಾಳೆಹೊಳೆ, ಜಿಶಾ, ವಸಂತ್, ಮಾರೆಪ್ಪ ಅರೋಲಿ ಸೇರಿ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್ಐಎ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.
ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ 6 ಮಂದಿ ನಕ್ಸಲರು ಶಸ್ತ್ರಾಸ್ತ್ರ ತ್ಯಜಿಸಿ ಶರಣಾದರು.
ಚಿಕ್ಕಮಗಳೂರು ಜಿಲ್ಲಾ ಪೊಲೀಸರು ಶರಣಾಗತಿಯಾದ ಆರು ಮಂದಿ ನಕ್ಸಲರನ್ನು NIA ವಿಶೇಷ ಕೋರ್ಟ್ಗೆ ಹಾಜರುಪಡಿಸಿದ್ದರು. ಇದೀಗ ಮುಂಡಗಾರು ಲತಾ, ಸುಂದ್ರಿ ಕೊತ್ಲೂರು, ವನಜಾಕ್ಷಿ ಬಾಳೆಹೊಳೆ, ಜಿಶಾ, ವಸಂತ್, ಮಾರೆಪ್ಪ ಅರೋಲಿ ಸೇರಿ 6 ಮಂದಿ ನಕ್ಸಲರಿಗೆ NIA ವಿಶೇಷ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಆರು ಜನ ನಕ್ಸಲರನ್ನು ಪೊಲೀಸರು ಬಿಗಿ ಭದ್ರತೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋಗಲಿದ್ದಾರೆ. 6 ಮಂದಿ ನಕ್ಸಲರು ಸೆಂಟ್ರಲ್ ಜೈಲಿನಲ್ಲಿ ಇರಲಿದ್ದಾರೆ.
ಇದನ್ನೂ ಓದಿ : ಕನ್ನಡದ ಹೆಸರಾಂತ ನಟನಿಗೆ ಒಲಿದ ಗೌರವ – ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ಕುಮಾರ್ ರಾಯಭಾರಿ!