ಕನ್ನಡದಲ್ಲಿ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ಹಾಗೂ ನಿರ್ಮಿಸಿರುವ ಆರ್ ಚಂದ್ರು, ಇತ್ತೀಚಿಗೆ ಆರ್ ಸಿ ಸ್ಟುಡಿಯೋಸ್ ಎಂಬ ನಿರ್ಮಾಣ ಸಂಸ್ಥೆ ಆರಂಭಿಸಿ, ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಮೊದಲ ಬಾರಿಗೆ ಏಕಕಾಲಕ್ಕೆ ಐದು ಚಿತ್ರಗಳಿಗೆ ಚಾಲನೆ ನೀಡಿದ್ದರು.
ಈಗ ಆರ್ ಸಿ ಸ್ಟುಡಿಯೋಸ್ ಸಂಸ್ಥೆ ಮೂಲಕ ಆರನೇ ಚಿತ್ರದ ಘೋಷಣೆಯಾಗಿದೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಆರನೇ ಚಿತ್ರದ ನಾಯಕರಾಗಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯಿಸುತ್ತಿದ್ದಾರೆ. ಈ ಕುರಿತು ಆರ್ ಚಂದ್ರು ಅವರು ಸಾಮಾಜಿಕ ಜಾಲತಾಣ ಖಾತೆ ಎಕ್ಸ್ನಲ್ಲಿ ಟ್ವೀಟ್ ಮಾಡುವ ಮೂಲಕ ಈ ವಿಷಯದ ಬಗ್ಗೆ ಮಾಹಿತಿ ನೀಡಿದ್ದಾರೆ.
ಆರ್ ಚಂದ್ರು ಸಾರಥ್ಯದ “ಆರ್ ಸಿ ಸ್ಟುಡಿಯೋಸ್” ನಿರ್ಮಾಣ ಸಂಸ್ಥೆ ಈ ವಷ ಜನವರಿಯಲ್ಲಿ ಉದ್ಘಾಟನೆಯಾಗಿತ್ತು. ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆರ್ ಸಿ ಸ್ಟುಡಿಯೋಸ್ ಉದ್ಘಾಟಿಸಿ, ಆರ್ ಸಿ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗಲಿರುವ ಐದು ಚಿತ್ರಗಳಿಗೆ ಚಾಲನೆ ನೀಡಿದ್ದರು.
ಆರ್.ಸಿ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗುತ್ತಿರುವ 5 ಚಿತ್ರಗಳಿವು – ‘ಶ್ರೀ ರಾಮ ಬಾಣ’, ‘ಕಬ್ಜ 2’, ‘ಪಿಓಕೆ’, ‘ಫಾದರ್’ ಮತ್ತು ‘ಡಾಗ್’
ಇದನ್ನೂ ಓದಿ : ಸಂಧಾನ ಯಶಸ್ವಿ- ಸುಮಲತಾ ಅಂಬರೀಶ್ ಬೆಂಬಲ ಬೆನ್ನಲ್ಲೇ ಹೆಚ್ಡಿಕೆ ಫುಲ್ ಆ್ಯಕ್ಟೀವ್..!