ಹೈದರಾಬಾದ್ : ಬಾಲಿವುಡ್ ಸೂಪರ್‌ಸ್ಟಾರ್, ಭಾಯಿಜಾನ್ ಸಲ್ಮಾನ್ ಖಾನ್ ಮುಂಬರುವ ಆಕ್ಷನ್ ಡ್ರಾಮಾ ಸಿನಿಮಾ ‘ಸಿಕಂದರ್’ನ ಸಿನಿಮಾದ ಚಿತ್ರೀಕರಣವನ್ನು ಹೆಚ್ಚಿನ ಭದ್ರತಾ ಕ್ರಮಗಳ ಮಧ್ಯೆ ಶುರು ಮಾಡಿಕೊಂಡಿದ್ದಾರೆ. ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಬೆದರಿಕೆಗೆ ಗುರಿಯಾಗಿರುವ ನಟ ಸಲ್ಮಾನ್ ಖಾನ್ ಅವರು, ಸದ್ಯ ಒಂದು ತಿಂಗಳ ಅವಧಿಯ ಶೂಟಿಂಗ್ ಶೆಡ್ಯೂಲ್ಗಾಗಿ ಹೈದರಾಬಾದ್‌ನಲ್ಲಿದ್ದಾರೆ.
‘ಸಿಕಂದರ್’ ಚಿತ್ರದ ಶೂಟಿಂಗ್ಗಾಗಿ 2 ಸೆಟ್ ಹಾಕಲಾಗಿದ್ದು, ಜೀವ ಬೆದರಿಕೆ ಹಿನ್ನೆಲೆಯಲ್ಲಿ ನಟ ಸಲ್ಮಾನ್ ಖಾನ್ ರಕ್ಷಣೆಗೆ 70 ಮಂದಿಯನ್ನು ನೇಮಕ ಮಾಡಲಾಗಿದೆ. ನಾಲ್ಕು ಲೇಯರ್ಗಳ ಭದ್ರತೆ ನೀಡಲಾಗಿದೆ. ಚಿತ್ರದ ಶೂಟಿಂಗ್ ಹೋಟೆಲ್ ಒಂದರಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ, ಭದ್ರತಾ ಸಿಬ್ಬಂದಿಗಳು ಹೋಟೆಲ್ನ್ನು ಸುಪರ್ದಿಗೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಈಗಾಗಲೇ ಸರ್ಕಾರದ ವಹಿತಿಯಿಂದ ಸಲ್ಮಾನ್ ಖಾನ್ಗೆ ವೈ ಪ್ಲಸ್ ಭದ್ರತೆ ನೀಡಲಾಗಿದೆ. ಅಂದರೆ ಸುಮಾರು 25 ಭದ್ರತಾ ಸಿಬ್ಬಂದಿ ಇಲ್ಲಿಯವರೆಗೆ ಅವರ ರಕ್ಷಣೆಗೆ ನಿಂತಿದ್ದರು. ಇದೀಗ ಆ ಸಂಖ್ಯೆಯನ್ನು 70ಕ್ಕೆ ಏರಿಸಲಾಗಿದೆ. ಸರ್ಕಾರದ ವತಿಯಿಂದ ಕೊಟ್ಟಿರುವ ರಕ್ಷಣೆಯಲ್ಲಿ 2 ರಿಂದ 4 ಎನ್‌ಎಸ್‌ಜಿ ಕಮಾಂಡೋಗಳು ಮತ್ತು ಪೊಲೀಸ್ ಅಧಿಕಾರಿಗಳು ಸೇರಿದ್ದಾರೆ. ಅವರು ಎರಡು ಪಾಳಿಯಲ್ಲಿ ಕೆಲಸ ಮಾಡುತ್ತಾರೆ. ಈ ತಂಡವು ಬುಲೆಟ್ ಪ್ರೂಫ್ ಸೇರಿದಂತೆ ಎರಡರಿಂದ ಮೂರು ವಾಹನಗಳನ್ನು ಬಳಸುತ್ತದೆ. ಈ ಭದ್ರತೆಯ ವೆಚ್ಚ ಪ್ರತಿ ತಿಂಗಳು ಸುಮಾರು 12 ಲಕ್ಷ ರೂಪಾಯಿಗಳನ್ನು ಸರ್ಕಾರ ಖರ್ಚು ಮಾಡುತ್ತಿದೆ.
ಇದನ್ನೂ ಓದಿ : ಮೆಟ್ಟಿಲಿನಿಂದ ಕೆಳಕ್ಕೆ ಜಾರಿ ಬಿದ್ದ ನಟ ವಿಜಯ್ ದೇವರಕೊಂಡ.. ವಿಡಿಯೋ ವೈರಲ್..!