Download Our App

Follow us

Home » ಜಿಲ್ಲೆ » 87ನೇ ಕನ್ನಡ ಸಾಹಿತ್ಯ ಸಮ್ಮೇಳನ : ಡಿ.20, 21ರಂದು ಮಂಡ್ಯ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ..!

87ನೇ ಕನ್ನಡ ಸಾಹಿತ್ಯ ಸಮ್ಮೇಳನ : ಡಿ.20, 21ರಂದು ಮಂಡ್ಯ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ..!

ಮಂಡ್ಯ : ಈ ಬಾರಿ ಸಕ್ಕರಿನಗರಿ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ನುಡಿ ಜಾತ್ರೆಯನ್ನು ಸಾಕಷ್ಟು ಅರ್ಥಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಆಚರಣೆ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನ, ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಡಿ.20 ಮತ್ತು 21ರಂದು ರಜೆ ಘೋಷಿಸಿ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಬುಧವಾರ ಆದೇಶ ಹೊರಡಿಸಿದ್ದಾರೆ.

ಡಿ.20ರಿಂದ 22ರವರೆಗೂ 3 ದಿನ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಹಿನ್ನಲೆ ಗಣ್ಯರು ಮತ್ತು ನೊಂದಾಯಿತ ಪ್ರತಿನಿಧಿಗಳು ಮಂಡ್ಯಕ್ಕೆ ಆಗಮಿಸಲಿದ್ದಾರೆ. ಅವರಿಗೆ ಜಿಲ್ಲೆಯ ಎಲ್ಲ ಶಾಲಾ, ಕಾಲೇಜುಗಳಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗುತ್ತೆ.

ಅಲ್ಲದೇ ನಾಡು-ನುಡಿ ಬಗ್ಗೆ ಅಭಿಮಾನ ಮೂಡಿಸುವ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಭಾಗಿಯಾಗಬೇಕು. ಆ ನಿಟ್ಟಿನಲ್ಲಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಡಿ.20, 21 ಎರಡು ದಿನ ರಜೆ ಘೋಷಣೆ ಮಾಡಲಾಗಿದೆ.

ಈ ನುಡಿ ಜಾತ್ರೆಯನ್ನ ಸಾಕಷ್ಟು ಅರ್ಥಪೂರ್ಣವಾಗಿ ನಡೆಸಲು ರಾಜ್ಯ ಸರ್ಕಾರ, ಕನ್ನಡ ಸಾಹಿತ್ಯ ಪರಿಷತ್ ಮತ್ತು ಮಂಡ್ಯ ಜಿಲ್ಲಾಡಳಿತ ಈಗಾಗಲೇ ಎಲ್ಲ ರೀತಿಯ ತಯಾರಿ ಮಾಡಿಕೊಂಡಿದೆ. ಮಂಡ್ಯ ಹೊರವಲಯದ ಶ್ರೀನಿವಾಸ್ ಪುರದ ಬಳಿ ಸುಮಾರು 60 ಎಕರೆ ಪ್ರದೇಶದಲ್ಲಿ ನುಡಿಹಬ್ಬವನ್ನ ಆಚರಣೆ ಮಾಡಲು ತಯಾರಿ ಮಾಡಲಾಗಿದೆ.

ಅಲ್ಲದೇ ಈಗಾಗಲೇ ಸಮ್ಮೇಳನದ ಗೌರವಾಧ್ಯಕ್ಷರಾಗಿ ಗೊರಾ ಚನ್ನಬಸವ ಅವರನ್ನ ಕೂಡ ಆಯ್ಕೆ ಮಾಡಲಾಗಿದೆ. ಸಮ್ಮೇಳನದ ಅಂಗವಾಗಿ ‌ಮನೆ ಮನೆಗೆ ಬಾವುಟ ನೀಡುವ ಕಾರ್ಯಕ್ರಮವನ್ನು ಇತ್ತೀಚೆಗೆ ಮಾಡಲಾಗಿದೆ. ಮಂಡ್ಯ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಪ್ರತಿ ಮನೆಗಳ ಮೇಲೆ ಬಾವುಟ ಹಾರಿಸಲು ಕರೆ ನೀಡಲಾಗಿದೆ. ಈ ಕಾರ್ಯಕ್ರಮಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ ನೀಡಿದ್ದರು.

ಇದನ್ನೂ ಓದಿ : ಜ.25ಕ್ಕೆ ನಮ್ ಟಾಕೀಸ್ ಆಯೋಜನೆಯ ಪ್ರತಿಷ್ಟಿತ ‘ಫ್ಯಾನ್ಸ್ ಕ್ರಿಕೆಟ್ ಲೀಗ್’ ಶುರು..!

 

 

Leave a Comment

DG Ad

RELATED LATEST NEWS

Top Headlines

ನಿಗದಿಗಿಂತ ಹೆಚ್ಚಿನ ಹಣಕ್ಕಾಗಿ ಗಲಾಟೆ – ನಡು ರಸ್ತೆಯಲ್ಲೇ ಪ್ರಯಾಣಿಕನಿಗೆ ನಿಂದಿಸಿ ಹಲ್ಲೆಗೆ ಯತ್ನಿಸಿದ ಓಲಾ ಕ್ಯಾಬ್​ ಡ್ರೈವರ್..!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ನಿಗದಿಗಿಂತ ಹೆಚ್ಚಿನ ಹಣ ನೀಡುವಂತೆ ಓಲಾ ಕ್ಯಾಬ್ ಡ್ರೈವರ್ ಕ್ಯಾತೆ ತೆಗೆದಿದ್ದು, ಚಾಲಕ ನಡು ರಸ್ತೆಯಲ್ಲೇ ಪ್ರಯಾಣಿಕನಿಗೆ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾನೆ.

Live Cricket

Add Your Heading Text Here