ಬೆಂಗಳೂರು : ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮೂರು ಕಡೆ 27 ಲೋಕಾಯುಕ್ತ ಅಧಿಕಾರಿಗಳ ತಂಡಗಳಿಂದ ದಾಳಿ ನಡೆದಿದೆ.
ಎಮ್ ಜಿ ರಸ್ತೆಯಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಉಪಲೋಕಾಯುಕ್ತ ಬಿ. ವೀರಪ್ಪ ತಂಡದಿಂದ ಬಸವೇಶ್ವರನಗರದಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿಯ ರಿಜಿನಲ್ ಆಫೀಸ್ ಹಾಗೂ ಲೋಕಾಯುಕ್ತ IG ಸುಬ್ರಮಣ್ಯಶ್ವೇರಾವ್ ತಂಡದಿಂದ ಪೀಣ್ಯ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.
ಭಷ್ಟಾಚಾರ, ಕರ್ತವ್ಯ ಲೋಪ ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ನಿಯಂತ್ರಣ ಮಂಡಳಿ ವಿರುದ್ದ ಲೋಕಾಯುಕ್ತಕ್ಕೆ ದೂರುಗಳು ಬಂದಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ನಿಯಂತ್ರಣ ಮಂಡಳಿ ವಿರುದ್ದ ಲೋಕಾಯುಕ್ತ ಸಂಸ್ಥೆ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದೆ.
ಇದನ್ನೂ ಓದಿ : ಪ್ರಪಾತದ ಬಳಿ ಬಸ್ ಪಲ್ಟಿ – ಅದೃಷ್ಟವಶಾತ್ 25 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!







