ತಮಿಳುನಾಡು : ಪೊಲೀಸ್ ಜೀಪ್ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ತಮಿಳುನಾಡಿನ ಕಿಲ್ಪೆನ್ನತುರ್ ಠಾಣಾ ವ್ಯಾಪ್ತಿಯ ತಿರುವಣ್ಣಾಮಲೈ- ದಿಂಡಿವನಂ ಹೈವೇಯಲ್ಲಿ ನಡೆದಿದೆ. ಪರಿಣಾಮ ಜೀಪ್ನಲ್ಲಿದ ಕರ್ನಾಟಕದ ಪೊಲೀಸ್ ಅಧಿಕಾರಿ KSRP ಅಸಿಸ್ಟೆಂಟ್ ಕಮಾಂಡೆಂಟ್ ಟಿ ಪ್ರಭಾಕರ್, ವಿಜಯಪುರ ಐಆರ್ಬಿಯ ವಿಠಲ್ ಗಡಾಧರ್, ತಮಿಳುನಾಡು ಕಾನ್ಸ್‌ಟೇಬಲ್ ದಿನೇಶ್ ಮೃತಪಟ್ಟಿದ್ದಾರೆ. ಉಳಿದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಕರ್ನಾಟಕದಿಂದ ಎಲೆಕ್ಷನ್ ಡ್ಯೂಟಿಗೆ ಹೋಗುತ್ತಿದ್ದರು ಎನ್ನಲಾಗಿದೆ. ನಿನ್ನೆ ಸಂಜೆ ನಾಲ್ಕು ಗಂಟೆ ಸುಮಾರಿಗೆ ತಿರುವಣ್ಣಾಮಲೈ- ದಿಂಡಿವನಂ ಹೈವೇಯಲ್ಲಿ ಅಪಘಾತ ಸಂಭವಿಸಿದ್ದು, ತೀವ್ರವಾಗಿ ಗಾಯಗೊಂಡಿದ್ದ ಇವರನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತಪಟ್ಟಿರುವ ಬಗ್ಗೆ ಪ್ರಭಾಕರ್ ಕುಟುಂಬಸ್ಥರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಅಪಘಾತದ ರಭಸಕ್ಕೆ ಜೀಪ್ ಛಿದ್ರವಾಗಿದ್ದು, ಬಸ್‌ನ ಮುಂಭಾಗ ಸಹ ಜಖಂ ಆಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಹೇಮಂತ್ ಕುಮಾರ್ (ಡೆಪ್ಯೂಟಿ ಕಮಾಂಡರ್), ಜಯಕುಮಾರ್ (ಕಾನ್ಸ್‌ಟೇಬಲ್) ಇಬರನ್ನು ತಿರುವಣ್ಣಾಮಲೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ : ಸೆಟ್ಟೇರಿತು ದುನಿಯಾ ವಿಜಯ್ ಅಭಿನಯದ 29ನೇ ಚಿತ್ರ – ಇದು ಆಳಿದವರ ಕಥೆಯಲ್ಲ, ಅಳಿದು ಉಳಿದವರ ಕಥೆ..!