Download Our App

Follow us

Home » ಮೆಟ್ರೋ » ಬೆಂಗಳೂರು : ಫ್ಲೈ ಓವರ್ ಮೇಲಿಂದ ಹಾರಿ ವ್ಯಕ್ತಿ ಆತ್ಮಹ*ತ್ಯೆ..!

ಬೆಂಗಳೂರು : ಫ್ಲೈ ಓವರ್ ಮೇಲಿಂದ ಹಾರಿ ವ್ಯಕ್ತಿ ಆತ್ಮಹ*ತ್ಯೆ..!

ಬೆಂಗಳೂರು : ಫ್ಲೈ ಓವರ್​ ಮೇಲಿಂದ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 32 ವರ್ಷದ ನವೀನ್ ಎಂಬಾತ ನಾಯಂಡಹಳ್ಳಿ ಫ್ಲೈ ಓವರ್ ಮೇಲಿಂದ ಕೆಳಗೆ ಜಿಗಿದಿದ್ದು, ಫ್ಲೈ ಓವರ್ ಮೇಲೆಯೆ ತನ್ನ ಬೈಕ್​​​ ಪಾರ್ಕಿಂಗ್ ಮಾಡಿ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನವೀನ್ KPTCLನಲ್ಲಿ ಕೆಲಸ ಮಾಡ್ತಿದ್ದ. ಎಲೆಕ್ಟ್ರಿಕ್​​​ ಬೈಕ್​​ನಲ್ಲಿ ಮನೆಯಿಂದ ಬಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ನವೀನ್ ನಾಲ್ಕು ತಿಂಗಳ ಹಿಂದೆ ಮದುವೆಯಾಗಿದ್ದ. ಎರಡು ತಿಂಗಳ ಹಿಂದೆ ಕವಿಕಾದಲ್ಲಿ ಕೆಲಸಕ್ಕೆ ಸೇರಿದ್ದ. ಕಾಂಟ್ರಾಕ್ಟ್ ಬೇಸ್ ಮೇಲೆ ಕೆಲಸಕ್ಕೆ ಸೇರಿದ್ದ ನವೀನ್​​​. ಡ್ಯೂಟಿ ಮೇಲೆ ಹೋಗ್ತಿದ್ದೀನಿ ಎಂದು ಮನೆಯಲ್ಲಿ ಹೇಳಿ ಬಂದಿದ್ದ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ಮುಂದುವರೆಸಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣಗಳೇನು ಎಂಬ ವಿಚಾರ ಇನ್ನಷ್ಟೇ ಹೊರಬಲಿದೆ. ಘಟನಾ ಸ್ಥಳದಲ್ಲಿ ಮೃತನ ತಂಗಿ ಸೇರಿ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ : ನಿರ್ಮಲಾನಂದ ಶ್ರೀಗಳ ಫೋನ್ ಟ್ಯಾಪಿಂಗ್ ಮಾಡಿಸಿದ್ದು ಕುಮಾರಸ್ವಾಮಿ – ಚಲುವರಾಯಸ್ವಾಮಿ ಗಂಭೀರ ಆರೋಪ..!

Leave a Comment

DG Ad

RELATED LATEST NEWS

Top Headlines

ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಡ್ರೆಸ್ ಕೋಡ್ ಜಾರಿ – ದೇವರ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ..!

ಚಿಕ್ಕಮಗಳೂರು : ಇತ್ತೀಚೆಗೆ ಶೃಂಗೇರಿಯ ಶ್ರೀ ಶಾರದಾಂಬೆ ಸನ್ನಿಧಾನದಲ್ಲಿ ಹಾಗೂ ಸುತ್ತಲಿನ ದೇವಸ್ಥಾನಗಳಲ್ಲಿ ಡ್ರೆಸ್ ಕೋಡ್ ಜಾರಿಯಾಗಿತ್ತು. ಇದೀಗ ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾದ ಹೊರನಾಡು ಶ್ರೀ

Live Cricket

Add Your Heading Text Here