ಸ್ಯಾಂಡಲ್ವುಡ್ನ ‘ಕೆಂಡಸಂಪಿಗೆ’ ನಟಿ ಮಾನ್ವಿತಾ ಕಾಮತ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಕೆಂಡಸಂಪಿಗೆ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಮಾನ್ವಿತಾ ಕಾಮತ್ ಮೇ 1ರಂದು ಹಸೆಮಣೆ ಏರಲಿದ್ದಾರೆ.
ಮಾನ್ವಿತಾ ಕಾಮತ್ ಮದುವೆಯ ಆಮಂತ್ರಣ ಪತ್ರಿಕೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದಾರೆ. ಮೈಸೂರು ಮೂಲದ ಅರುಣ್ ಎನ್ನುವವರ ಜೊತೆ ಮಾನ್ವಿತಾ ಮದುವೆ ಆಗುತ್ತಿದ್ದು, ಅರುಣ್ ಕೂಡ ಸಿನಿಮಾ ರಂಗಕ್ಕೆ ಹತ್ತಿರವಾದವರೇ ಎಂದು ಹೇಳಲಾಗುತ್ತಿದೆ. ಏಪ್ರಿಲ್ 30ಕ್ಕೆ ಅರಿಶಿನ ಶಾಸ್ತ್ರ ಮತ್ತು ಮೇ 1ಕ್ಕೆ ಮದುವೆ ನಡೆಯಲಿದೆ.
ಮಾನ್ವಿತಾ ಮೊದಲು ಆರ್.ಜೆಯಾಗಿ ವೃತ್ತಿಯನ್ನು ಆರಂಭಿಸಿದ್ದರು. ಆನಂತರ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಸೂರಿ ನಿರ್ದೇಶನದ ಕೆಂಡ ಸಂಪಿಗೆ ಸಿನಿಮಾದ ಮೂಲಕ ಮಾನ್ವಿತಾ ಕಾಮತ್ ಖ್ಯಾತಿ ಪಡೆದಿದ್ದಾರೆ. ಕೆಂಡ ಸಂಪಿಗೆ ಸಿನಿಮಾದ ನಂತರ ಟಗರು ಸಿನಿಮಾದ ಮೂಲಕ ಸಾಕಷ್ಟು ಜನಕ್ಕೆ ಪರಿಚಯವಾದರು. ಅಲ್ಲಿಂದ ಮಾನ್ವಿತಾ ಅವರು ಟಗರು ಪುಟ್ಟಿ ಎಂದೇ ಫೇಮಸ್ ಆಗಿದ್ದಾರೆ.
ಇದನ್ನೂ ಓದಿ : ಬೆಂಗಳೂರು : ನಿವೃತ್ತ ಪೊಲೀಸ್ ಅಧಿಕಾರಿ ಮನೆ ದೋಚಿದ್ದ ನಾಲ್ವರು ಅರೆಸ್ಟ್..!