Download Our App

Follow us

Home » ಮೆಟ್ರೋ » ನಾಳೆಯಿಂದ ಐತಿಹಾಸಿಕ ಬೆಂಗಳೂರು ಕರಗ ಶುರು..!

ನಾಳೆಯಿಂದ ಐತಿಹಾಸಿಕ ಬೆಂಗಳೂರು ಕರಗ ಶುರು..!

ಬೆಂಗಳೂರು : ಐತಿಹಾಸಿಕ ಬೆಂಗಳೂರು ಕರಗ ಉತ್ಸವ ನಾಳೆಯಿಂದಲೇ ಆರಂಭವಾಗಲಿದ್ದು, ಈಗಾಗಲೇ ಸಿದ್ಧತೆಗಳು ಭರದಿಂದ ಸಾಗಿವೆ. ಶ್ರೀ ಧರ್ಮರಾಯಸ್ವಾಮಿ ದೇವಾಲಯವು ಸುಣ್ಣ-ಬಣ್ಣಗಳಿಂದ ಕಂಗೊಳಿಸುತ್ತಿದ್ದು, ಕರಗ ಸಾಗುವ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಾಡಲಾಗಿದೆ.

ಬೆಂಗಳೂರು ಕರಗ ಮಹೋತ್ಸವ ಏಪ್ರಿಲ್ 15 ರಿಂದ 23 ರವರೆಗೆ ನಡೆಯಲಿದ್ದು, ಈ ಬಾರಿಯೂ ಕರಗದ ಪೂಜಾರಿ ಎ.ಜ್ಞಾನೇಂದ್ರ ಅವರು ಕರಗ ಹೊರಲಿದ್ದಾರೆ. 13 ನೇ ಬಾರಿ ಬೆಂಗಳೂರು ಕರಗ ಹೊರಲು ಎ.ಜ್ಞಾನೇಂದ್ರ ಅವರನ್ನು ಮುಜರಾಯಿ ಮತ್ತು ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಆಯ್ಕೆ ಮಾಡಿದೆ.

  • ಏಪ್ರಿಲ್ 15 ರಾತ್ರಿ 10ಕ್ಕೆ ರಥೋತ್ಸವ ಧ್ವಜಾರೋಹಣ
  • ಏಪ್ರಿಲ್ 16 ರಿಂದ 19 ಪ್ರತಿ ದಿನ ವಿಶೇಷ ಪೂಜೆ ಮತ್ತು ಮಂಗಳಾರತಿ
  • ಏಪ್ರಿಲ್ 21ಕ್ಕೆ ಹಸಿ ಕರಗ ಆಯೋಜನೆ
  • ಏಪ್ರಿಲ್ 23 ರಂದು ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯ ರಥೋತ್ಸವ
  • ಏಪ್ರಿಲ್ 24ರಂದು ದೇವಸ್ಥಾನದಲ್ಲಿ ಗಾವು ಪೂಜೆ
  • 25ಕ್ಕೆ ಕೊನೆಯ ದಿನದ ವಸಂತೋತ್ಸವ ಧ್ವಜಾರೋಹಣ

ಇದನ್ನೂ ಓದಿ : ರಾಜ್ಯಕ್ಕೆ ಮೋದಿ ಎಂಟ್ರಿಯಿಂದ ರಂಗೇರಿದ ಲೋಕ ಅಖಾಡ – ನಮೋ ಸ್ವಾಗತಕ್ಕೆ ಭರ್ಜರಿ ಸಿದ್ಧತೆ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here