ಮುಂಬೈ : ಬಾಂದ್ರಾದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಬಳಿ ನಡೆದ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಗುಜರಾತ್ನ ಭುಜ್ನಲ್ಲಿ ಕ್ರೈಂ ಬ್ರ್ಯಾಂಚ್ ಪೊಲೀಸರು ಬಂಧಿಸಿದ್ದಾರೆ.
ಶಾರ್ಪ್ ಶೂಟರ್ಗಳೇ ಗುಂಡು ಹಾರಿಸಿರುವ ಮಾಹಿತಿ ಸಿಕ್ಕಿದೆ. ಇಬ್ಬರು ಆರೋಪಿಗಳನ್ನು ಗುಜರಾತ್ನಿಂದ ಮುಂಬೈಗೆ ಕರೆ ತಂದಿದ್ದಾರೆ. ಮುಂಬೈ ಕ್ರೈಂಬ್ರಾಂಚ್ ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ. ದಾಳಿ ಮಾಡಿದ್ದೇಕೆ..? ಯಾರ ಪ್ರಚೋದನೆ ಅನ್ನೋ ಬಗ್ಗೆ ವಿಚಾರಣೆ ಮಾಡಲಾಗ್ತಿದೆ.
ಕಳೆದ ಭಾನುವಾರ ಮುಂಜಾನೆ ಬೈಕ್ನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ನಾಲ್ಕು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದರು. ಗುಂಡಿನ ದಾಳಿ ನಡೆದಾಗ ಸಲ್ಮಾನ್ ಖಾನ್ ಮನೆಯಲ್ಲೇ ಇದ್ದರು ಎನ್ನಲಾಗಿದ್ದು, ಕೃತ್ಯದಲ್ಲಿ ಯಾವುದೇ ಸಾವು-ನೋವು ಸಂಭವಿಸಿರಲಿಲ್ಲ.
ಶ್ಇರೀ- ದನ್ನೂ ಓದಿ : ತುಮಕೂರು : ಮಾಜಿ ಪ್ರಧಾನಿ ದೇವೇಗೌಡರಿದ್ದ ವೇದಿಕೆಗೆ ನುಗ್ಗಿ ಕಾಂಗ್ರೆಸ್ ಕಾರ್ಯಕರ್ತೆಯರಿಂದ ಹೈಡ್ರಾಮಾ..!
Post Views: 204