ತುಂಬಿದ ಕೊಡ ತುಳುಕಿತಲೇ ಪರಾಕ್‌ – ಐತಿಹಾಸಿಕ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿದ ಭವಿಷ್ಯವಾಣಿ!

ಹಾವೇರಿ : ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ ಐತಿಹಾಸಿಕ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ ನಡೆದಿದೆ. ಮೈಲಾರದ ಡಂಗನಮರಡಿಯಲ್ಲಿ 18 ಅಡಿ ಬಿಲ್ಲನ್ನೇರಿ ಗೊರವಯ್ಯ ರಾಮಪ್ಪ ಈ ವರ್ಷದ ದೈವವಾಣಿಯನ್ನು ನುಡಿದಿದ್ದಾರೆ. “ತುಂಬಿದ ಕೊಡ ತುಳುಕಿತಲೇ ಪರಾಕ್‌” ಎಂದು ಭವಿಷ್ಯವಾಣಿ ನುಡಿದಿದ್ದಾರೆ. ಇನ್ನು ಈ ವೇಳೆ ಮೈಲಾರಲಿಂಗೇಶ್ವರನ ಕಾರ್ಣಿಕ ಕೇಳಿ ಲಕ್ಷಾಂತರ ಭಕ್ತರು ಪುನೀತರಾದರು.

ಎಲ್ಲಾ ಜಾತ್ರೆಗಳಲ್ಲಿ ರಥೋತ್ಸವ ನಡೆಯುತ್ತದೆ, ಆದರೆ ಐತಿಹಾಸಿಕ ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವದಲ್ಲಿ ರಥೋತ್ಸವ ನಡೆಯುವುದಿಲ್ಲ. ಬದಲಿಗೆ 11 ದಿನ ಉಪವಾಸ ಇರುವ ಗೊರವಯ್ಯ 18 ಅಡಿ ಬಿಲ್ಲೇನೇರಿ ಕಾರ್ಣಿಕ ನುಡಿಯುತ್ತಾನೆ. ಇದನ್ನ ವರ್ಷದ ಭವಿಷ್ಯವಾಣಿ ಎಂದೇ ಪರಿಣಿಸಲಾಗುತ್ತೆ.

ಇಂದು ಸರಿಯಾಗಿ 5.30 ನಿಮೀಷಕ್ಕೆ 18 ಅಡಿ ಬಿಲ್ಲೇನೇರಿದ ಗೊರವಯ್ಯ ರಾಮಪ್ಪಜ್ಜ “ತುಂಬಿದ ಕೊಡ ತುಳುಕೀತಲೇ ಪರಾಕ್” ಎಂದು ನುಡಿದು ಕೆಳಗೆ ಧುಮುಕಿದ. ರಾಮಪ್ಪಜ್ಜ ಬಿಲ್ಲೇರಿ ಸದ್ದಲೇ ಎನ್ನುತ್ತಿದ್ದಂತೆ ಲಕ್ಷಾಂತರ ಸಂಖ್ಯೆಯಲ್ಲಿದ್ದ ಜನಸಾಗರವೇ ಸ್ಥಬ್ಧವಾಯಿತು. ಈ ಕಾರ್ಣಿಕ ಕೇಳಲು ರಾಜ್ಯ, ಹೊರರಾಜ್ಯ ಹಾಗೂ ಹೊರದೇಶಗಳಿಂದಲೂ ಭಕ್ತರು ಮೈಲಾರಕ್ಕೆ ಆಗಮಿಸಿದ್ದರು.

ಗೊರವಪ್ಪಜ್ಜ ಕಾರ್ಣಿಕ ನುಡಿಯುತ್ತಿದ್ದಂತೆ ಭಕ್ತರು ಕಾರ್ಣಿಕ ವಿಶ್ಲೇಷಣೆ ಮಾಡಲಾರಂಭಿಸಿದರು. ಮೈಲಾರ ಕ್ಷೇತ್ರದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಕಾರ್ಣೀಕ ಶುಭಸೂಚಕವಾಗಿದೆ ಎಂದು ತಿಳಿಸಿದರು. ಮೈಲಾರಲಿಂಗೇಶ್ವರ ಕಾರ್ಣಿಕವನ್ನು ವರ್ಷದ ಭವಿಷ್ಯವಾಣಿ ಎಂತಲೇ ನಂಬಿಕೊಂಡು ಬರಲಾಗಿದೆ. ಹಲವಾರು ವರ್ಷಗಳಿಂದ ಮೈಲಾರಲಿಂಗೇಶ್ವರ ಕಾರ್ಣಿಕಕ್ಕೆ ಎಲ್ಲಿಲ್ಲದ‌ ಮಹತ್ವವಿದೆ.

ಇದನ್ನೂ ಓದಿ : http://‘ವ್ಯಾಲೆಂಟೈನ್ಸ್​ ಡೇ’ಗೆ 389 ರೂ. ಕೊಟ್ರೆ ಬಾಡಿಗೆ ಬಾಯ್ ಫ್ರೆಂಡ್ – ಇದೆಂಥಾ ಆಫರ್?

Btv Kannada
Author: Btv Kannada

Leave a Comment

Read More