Download Our App

Follow us

Home » ರಾಷ್ಟ್ರೀಯ » ಸೂರ್ಯವಂಶಸ್ಥ ಶ್ರೀ ರಾಮನಿಗೆ ಸೂರ್ಯ ರಶ್ಮಿ..!

ಸೂರ್ಯವಂಶಸ್ಥ ಶ್ರೀ ರಾಮನಿಗೆ ಸೂರ್ಯ ರಶ್ಮಿ..!

ಅಯೋಧ್ಯೆ : ಇಂದು ದೇಶಾದ್ಯಂತ ರಾಮನವಮಿ ಆಚರಿಸಲಾಗುತ್ತಿದ್ದು, ಅಯೋಧ್ಯೆಯಲ್ಲಿ ಶ್ರೀರಾಮನವಮಿ ಸಂಭ್ರಮ ಮುಗಿಲು ಮುಟ್ಟಿದೆ. ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠೆಯಿಂದಾಗಿ ಈ ಬಾರಿಯ ರಾಮನವಮಿ ಸಂಭ್ರಮ ವಿಶೇಷವಾಗಿದೆ.

ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಬಳಿಕ ಮೊದಲ ರಾಮನವಮಿಯನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ. ಇಂದು ಸುಮಾರು 12ಗಂಟೆಗೆ ರಾಮ್ ಲಲ್ಲಾನ ಹಣೆಯ ಮೇಲೆ ಸೂರ್ಯ ರಶ್ಮಿ ಸ್ಪರ್ಶವಾಗಿದೆ. ನಾಲ್ಕು ನಿಮಿಷಗಳ ಕಾಲ ಬಾಲರಾಮನ ಹಣೆಯ ಮೇಲೆ ಸೂರ್ಯತಿಲಕ ಮೂಡಿದೆ. ಈ ಬಗ್ಗೆ ಇತ್ತೀಚೆಗೆ ವಿಜ್ಞಾನಿಗಳು ಪರೀಕ್ಷಾರ್ಥ ಪ್ರಯೋಗವನ್ನೂ ಮಾಡಿದ್ದು, ಇದೀಗ ಸೂರ್ಯತಿಲಕ ಯಶಸ್ವಿಯಾಗಿ ಮೂಡಿಬಂದಿದೆ.

ಅಯೋಧ್ಯೆಯ ರಾಮ ಮಂದಿರಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಬೆಳಗ್ಗೆಯೇ ಆಗಮಿಸಿ ಬಾಲಕ ರಾಮನ ದರ್ಶನ ಪಡೆಯುತ್ತಿದ್ದಾರೆ. ರಾಮಮಂದಿರದಲ್ಲಿ ಬೆಳಗಿನ ಜಾವ 3.30ಕ್ಕೆ ದರ್ಶನ ಆರಂಭವಾಗಿದ್ದು, ಆಗಿನಿಂದಲೇ ಭಕ್ತರು ನಿರಂತರ ದರ್ಶನದಲ್ಲಿ ತೊಡಗಿದ್ದಾರೆ.

ಇದನ್ನೂ ಓದಿ : ಯುಪಿಎಸ್​ಸಿ ಪರೀಕ್ಷೆಯಲ್ಲಿ ರಾಜ್ಯದ 25 ಮಂದಿಗೆ ರ್‍ಯಾಂಕ್​​ – ವಿಜಯಪುರದ ವಿಜೇತ ರಾಜ್ಯಕ್ಕೆ ಟಾಪರ್​​​​..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here