Download Our App

Follow us

Home » ಅಪರಾಧ » ಜೈ ಶ್ರೀರಾಮ್ ಘೋಷಣೆ ವಿಚಾರ : ಹಿಂದೂ ಯುವಕರ ಮೇಲೆ ಹಲ್ಲೆ ಮಾಡಿದ್ದ ಮೂವರು ಅರೆಸ್ಟ್​..!

ಜೈ ಶ್ರೀರಾಮ್ ಘೋಷಣೆ ವಿಚಾರ : ಹಿಂದೂ ಯುವಕರ ಮೇಲೆ ಹಲ್ಲೆ ಮಾಡಿದ್ದ ಮೂವರು ಅರೆಸ್ಟ್​..!

ಬೆಂಗಳೂರು : ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಮೂವರು ಹಿಂದೂ ಯುವಕರ ಮೇಲೆ ಹಲ್ಲೆ ಮಾಡಿದ ಘಟನೆ ನಿನ್ನೆ ಬೆಂಗಳೂರಿನಲ್ಲಿ ನಡೆದಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೂವರು ಹಿಂದೂ ಯುವಕರು ಕಾರಿನಲ್ಲಿ ಹೋಗುತ್ತಿದ್ದಾಗ ಜೈ ಶ್ರೀರಾಮ್ ಎಂದು ಕೂಗಿದ್ದಾರೆ. ಈ ವೇಳೆ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕರು ಕಾರನ್ನು ತಡೆದು ನಿಲ್ಲಿಸಿ ಗಲಾಟೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಇದೀಗ ಹಿಂದೂ ಯುವಕರ ಮೇಲೆ ಹಲ್ಲೆ ಮಾಡಿದ್ದ ಮೂವರನ್ನು ವಿದ್ಯಾರಣ್ಯಪುರ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ವಿಡಿಯೋದಲ್ಲಿರೋ ಓರ್ವ ಹಾಗೂ ಹಲ್ಲೆ ಮಾಡಿದ್ದ ಇಬ್ಬರ ಬಂಧನವಾಗಿದ್ದು, ಪೊಲೀಸರು ಈಗಾಗಲೇ ಆರೋಪಿಗಳ ವಿಚಾರಣೆ ನಡೆಸ್ತಿದ್ದಾರೆ. ಉಳಿದ ಆರೋಪಿಗಾಗಿ ಹುಡುಕಾಟ ಮುಂದುವರೆದಿದೆ. ಗಾಂಜಾ ನಶೆಯಲ್ಲಿ ಹಲ್ಲೆ ಮಾಡಿದ್ರಾ ಯುವಕರು..? ಅನ್ನೊ ಪ್ರಶ್ನೆ ಹುಟ್ಟಿಕೊಂಡಿದೆ.

ಗಾಂಜಾ ನಶೆಯಲ್ಲಿ ಕಾರು ಅಡ್ಡ ಹಾಕಿ ಗಲಾಟೆ ಮಾಡಿರೋ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಆರೋಪಿಗಳ ಮೆಡಿಕಲ್ ಟೆಸ್ಟ್ ಮಾಡಿಸಲಿದ್ದಾರೆ. ಸದ್ಯ ಪೊಲೀಸರು ಆರೋಪಿಗಳ ತೀವ್ರ ವಿಚಾರಣೆ ನಡೆಸ್ತಿದ್ದಾರೆ. ಜೈಶ್ರೀರಾಮ್​ ಅನ್ನಂಗಿಲ್ಲ.. ಒನ್ಲೀ ಅಲ್ಲಾ ಹು ಅಕ್ಬರ್ ಅನ್ನಬೇಕು ಎಂದು ಯುವಕರು ಪುಂಡಾಟ ನಡೆಸಿದ್ದರು.

Leave a Comment

DG Ad

RELATED LATEST NEWS

Top Headlines

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ : ಪುರುಷರ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ನವದೀಪ್ ಸಿಂಗ್..!

ಪ್ಯಾರಿಸ್ : ಪ್ಯಾರಾಲಿಂಪಿಕ್ಸ್​ನಲ್ಲಿ ಶನಿವಾರ ನಡೆದ ಪುರುಷರ ಜಾವೆಲಿನ್ ಥ್ರೋ ಎಫ್​41 ಸ್ಪರ್ಧೆಯಲ್ಲಿ ಭಾರತದ ಜಾವೆಲಿನ್ ಎಸೆತಗಾರ ನವದೀಪ್ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ. 47.32 ಮೀಟರ್‌ ದೂರಕ್ಕೆ

Live Cricket

Add Your Heading Text Here