Download Our App

Follow us

Home » Uncategorized » ಇಂದಿನಿಂದ ರಾಜ್ಯದಲ್ಲಿ 5ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ..!

ಇಂದಿನಿಂದ ರಾಜ್ಯದಲ್ಲಿ 5ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ..!

ಬೆಂಗಳೂರು : ರಾಜ್ಯದಲ್ಲಿ ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನತೆಗೆ  ಮಳೆ ತುಸು ತಂಪೆರೆದು ಹೋಗಿದೆ. ರಾಜ್ಯದ ಹಲವೆಡೆ ಮೊದಲ ವರುಣನ ಸಿಂಚನದಿಂದ ಜನರು ಸಂತಸಗೊಂಡಿದ್ದರು. ಆದರೆ, ಕಳೆದೆರಡು ದಿನಗಳಿಂದ ಮರೆಯಾಗಿದ್ದ ಮಳೆರಾಯ ಮತ್ತೆ ರಾಜ್ಯದಲ್ಲಿ ದರ್ಶನ ಕೊಡುವ ಮುನ್ಸೂಚನೆ ಸಿಕ್ಕಿದೆ.

ರಾಜ್ಯದಲ್ಲಿ 18ನೇ ಏಪ್ರಿಲ್ ಅಂದ್ರೆ ಇಂದಿನಿಂದ  5 ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಅಲ್ಲಲ್ಲಿ ಚದುರಿದಂತೆ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಅದರಲ್ಲೂ ಏಪ್ರಿಲ್ 21ರಂದು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯ ಎಚ್ಚರಿಕೆ ನೀಡಲಾಗಿದೆ.

ಇಂದು ಹಾಸನ, ಮೈಸೂರು, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಸೇರಿ ಬೆಳಗಾವಿ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ವರದಿಯಾಗಿದೆ.

Leave a Comment

DG Ad

RELATED LATEST NEWS

Top Headlines

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ : ಪುರುಷರ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ನವದೀಪ್ ಸಿಂಗ್..!

ಪ್ಯಾರಿಸ್ : ಪ್ಯಾರಾಲಿಂಪಿಕ್ಸ್​ನಲ್ಲಿ ಶನಿವಾರ ನಡೆದ ಪುರುಷರ ಜಾವೆಲಿನ್ ಥ್ರೋ ಎಫ್​41 ಸ್ಪರ್ಧೆಯಲ್ಲಿ ಭಾರತದ ಜಾವೆಲಿನ್ ಎಸೆತಗಾರ ನವದೀಪ್ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ. 47.32 ಮೀಟರ್‌ ದೂರಕ್ಕೆ

Live Cricket

Add Your Heading Text Here