Download Our App

Follow us

Home » ಸಿನಿಮಾ » ಕಿರುತೆರೆಯಲ್ಲಿ ಪ್ರಸಾರವಾಗಲಿದೆ ಬ್ಲಾಕ್ ಬಸ್ಟರ್ ಸಿನಿಮಾ ‘ಸಲಾರ್’ : ಪ್ರೇಕ್ಷಕರಿಗೆ ಬೈಕ್ ಗೆಲ್ಲುವ ಅವಕಾಶ..!

ಕಿರುತೆರೆಯಲ್ಲಿ ಪ್ರಸಾರವಾಗಲಿದೆ ಬ್ಲಾಕ್ ಬಸ್ಟರ್ ಸಿನಿಮಾ ‘ಸಲಾರ್’ : ಪ್ರೇಕ್ಷಕರಿಗೆ ಬೈಕ್ ಗೆಲ್ಲುವ ಅವಕಾಶ..!

ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು ನೀಡುತ್ತಾ ಬಂದಿದೆ. ವಿಶ್ವ-ವಿಖ್ಯಾತಿ ಪಡೆದ ಕಾಂತಾರ, ಹೊಯ್ಸಳ, ಜೇಮ್ಸ್ ನಂತಹ ಸೂಪರ್ ಡೂಪರ್ ಹಿಟ್ ಸಿನಿಮಾಗಳನ್ನು ಪ್ರಸಾರ ಮಾಡಿ ಪ್ರೇಕ್ಷಕರ ಮನಗೆದ್ದ ಸುವರ್ಣ ವಾಹಿನಿಯಲ್ಲಿ ಇದೀಗ 2023ರ ಬ್ಲಾಕ್ ಬಸ್ಟರ್ ಹಿಟ್ “ಸಲಾರ್” ಸಿನಿಮಾ ಪ್ರಸಾರವಾಗಲಿದೆ. ಜೊತೆಗೆ ವೀಕ್ಷಕರಿಗೆ ಬೈಕ್ ಗೆಲ್ಲುವ ಅವಕಾಶವನ್ನು ಸುವರ್ಣ ವಾಹಿನಿಯು ನೀಡುತ್ತಿದೆ.

ರೆಬಲ್ ಸ್ಟಾರ್ ಪ್ರಭಾಸ್ ಅಭಿನಯದ ‘ಸಲಾರ್’ ಸಿನಿಮಾವು ಬಾಕ್ಸ್ ಆಫೀಸ್​ನಲ್ಲಿ 700 ಕೋಟಿ ರೂಪಾಯಿ ಕಮಾಯಿ ಮಾಡಿತ್ತು. ಇದೀಗ ಈ ಸಿನಿಮಾವು ‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ಸುವರ್ಣ ವರ್ಲ್ಡ್ ಪ್ರೀಮಿಯರ್ ಆಗುತ್ತಿದ್ದು. ಈ ಸಿನಿಮಾದಲ್ಲಿ ವೀಕ್ಷಕರಿಗೆ ಪ್ರಭಾಸ್ ಅವರ ಲುಕ್ ಜೊತೆಗೆ ಸಿನಿಮಾದಲ್ಲಿ ಬಳಸಲಾಗಿದ್ದ ಬೈಕ್ ದೊಡ್ಡ ಮಟ್ಟದ ಕ್ರೇಜ್ ಸೃಷ್ಟಿ ಮಾಡಿತ್ತು. ಇದೀಗ ಆ ಬೈಕ್ ಗೆಲ್ಲೋ ಅವಕಾಶವನ್ನು ನೋಡುಗರಿಗೆ ಹೊಂಬಾಳೆ ಫಿಲಂಸ್ ನಿರ್ಮಾಣ ಸಂಸ್ಥೆಯು ನೀಡುತ್ತಿದೆ. ‘ಸಲಾರ್’ ಸಿನಿಮಾ ನೋಡ್ತಾ ನೋಡ್ತಾ, ಅಲ್ಲಿ ಕೇಳೊ ಪ್ರಶ್ನೆಗಳಿಗೆ ಆದಷ್ಟು ಬೇಗ ಸರಿಯಾದ ಉತ್ತರ ಕೊಟ್ರೆ, ಅದೃಷ್ಟಶಾಲಿ ವಿಜೇತರಿಗೆ ‘ಸಲಾರ್’ ನಲ್ಲಿ ಪ್ರಭಾಸ್ ಬಳಸಿರೋ ಬೈಕ್ ಬಹುಮಾನವಾಗಿ ಸಿಗಲಿದೆ.


ಕನ್ನಡದ ಹೆಸರಾಂತ ನಿರ್ದೇಶಕ ಪ್ರಶಾಂತ್ ನೀಲ್ ‘ಸಲಾರ್’ ಸಿನಿಮಾವನ್ನು ನಿರ್ದೇಶಿಸಿದ್ದು, ಹೊಂಬಾಳೆ ಫಿಲಂಸ್ ಈ ಸಿನಿಮಾವನ್ನು ನಿರ್ಮಿಸಿದೆ. ಇನ್ನು ಈ ಸಿನಿಮಾದ ಹಾಡುಗಳು ಅದ್ಭುತ ರೀತಿಯಲ್ಲಿ ಮೂಡಿ ಬಂದಿದ್ದು ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್​​ನಲ್ಲಿತ್ತು.

ಇದನ್ನೂ ಓದಿ : ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ‘ದ ಜಡ್ಜ್ ಮೆಂಟ್’ ಚಿತ್ರದ ಶೂಟಿಂಗ್ ಕಂಪ್ಲೀಟ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here