Download Our App

Follow us

Home » ರಾಷ್ಟ್ರೀಯ » ನಡು ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್‌ – 35ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರು..!

ನಡು ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್‌ – 35ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರು..!

ಮುಂಬೈ : ಮುಂಬೈ-ಪುಣೆ ಎಕ್ಸ್​ಪ್ರೆಸ್​ ಹೈವೇಯಲ್ಲಿ ಖಾಸಗಿ ಬಸ್​ ಧಗಧಗನೆ ಹೊತ್ತಿ ಉರಿದಿದೆ. ಬಸ್ ಮುಂಬೈನಿಂದ ಪುಣೆಗೆ ತೆರಳುತ್ತಿದ್ದಾಗ ಮಾವಲ್‌ನ ಅಧೆ ಗ್ರಾಮದ ಬಳಿ ಬೆಳಿಗ್ಗೆ 7:30ರ ಸುಮಾರಿಗೆ ಈ ಘಟನೆ ನಡೆದಿದೆ.

ಬಸ್​ನಲ್ಲಿ 35ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೂಲಗಳ ಪ್ರಕಾರ, ಟೈರ್ ಸ್ಫೋಟಗೊಂಡು ನಂತರ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಕೂಡಲೇ ಎಚ್ಚೆತ್ತ ಬಸ್ ಚಾಲಕ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರವಾಗುವಂತೆ ಸೂಚಿಸಿ ಆಗಬೇಕಿದ್ದ ದುರಂತವನ್ನು ತಪ್ಪಿಸಿದ್ದಾನೆ. ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಮತ್ತು ಮಾವಲ್ ಟ್ರಾಫಿಕ್ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಬೆಂಕಿಯನ್ನು ನಂದಿಸುವ ಕಾರ್ಯಚರಣೆ ನಡೆಸಿದ್ದಾರೆ.

ಇದನ್ನೂ ಓದಿ : ವೋಟ್ ಹಾಕೋಕೆ ಬರಲೇ ಇಲ್ಲ ನಟಿ ರಮ್ಯಾ, ರಶ್ಮಿಕಾ – ನೆಟ್ಟಿಗರಿಂದ ಭಾರೀ ಆಕ್ರೋಶ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here