ಕಲಬುರಗಿ : ಲೋಕಸಭೆ ಚುನಾವಣೆ ಹೊತ್ತಲ್ಲೇ ರಾಜ್ಯದ ಹಲವಡೆ ರೇಡ್ ನಡೆಸಿರುವ ಐಟಿ ಅಧಿಕಾರಿಗಳು, ಕಳೆದ ಕೆಲವು ದಿನಗಳಲ್ಲಿ ಕೋಟ್ಯಂತರ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ. ಇದೀಗ, ಐಟಿ ಅಧಿಕಾರಿಗಳು ಕಲಬುರಗಿಯ ರೈಲು ನಿಲ್ದಾಣದ ಬಳಿ ದಾಳಿ ನಡೆಸಿ ಎರಡು ಕೋಟಿ ಹಣ ಜಪ್ತಿ ಮಾಡಿದ್ದಾರೆ.
ವ್ಯಕ್ತಿಯೊಬ್ಬರು ರೈಲಿನಿಂದ ಇಳಿದು ಕಾರನ್ನು ಏರಿ ಹೊರಡುವ ಸಂದರ್ಭದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೇ ವೇಳೆ ಎರಡು ಕೋಟಿ ರೂಪಾಯಿ ನಗದು ಪತ್ತೆಯಾಗಿದೆ. ಸದ್ಯ ನಗದು ಮತ್ತು ಕಾರನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕಾಂಗ್ರೆಸ್ ಪಕ್ಷದ ಮಾಜಿ ಮೇಯರ್ ಒಬ್ಬರಿಗೆ ಸೇರಿದ ಕಾರು ಇದು ಎಂದು ಹೇಳಲಾಗಿದೆ. ಕಾರ್ ವಶಕ್ಕೆ ಪಡೆದು ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡ್ತಿದ್ದಾರೆ. ಎಲೆಕ್ಷನ್ ಉದ್ದೇಶಕ್ಕೆ ಹಣ ತಂದಿರುವ ಶಂಕೆ ಮೇಲೆ ವಿಚಾರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ : ನಡು ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್ – 35ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರು..!
Post Views: 102