Download Our App

Follow us

Home » ಅಪರಾಧ » ಹುಬ್ಬಳ್ಳಿ ನೇಹಾ ಹಿರೇಮಠ ಹ*ತ್ಯೆ ಪ್ರಕರಣ : ಆರೋಪಿ ಫಯಾಜ್​​ನನ್ನ ನ್ಯಾಯಾಲಯಕ್ಕೆ ಕರೆತಂದ ಸಿಐಡಿ ಅಧಿಕಾರಿಗಳು..!

ಹುಬ್ಬಳ್ಳಿ ನೇಹಾ ಹಿರೇಮಠ ಹ*ತ್ಯೆ ಪ್ರಕರಣ : ಆರೋಪಿ ಫಯಾಜ್​​ನನ್ನ ನ್ಯಾಯಾಲಯಕ್ಕೆ ಕರೆತಂದ ಸಿಐಡಿ ಅಧಿಕಾರಿಗಳು..!

ಹುಬ್ಬಳ್ಳಿ : ಹುಬ್ಬಳ್ಳಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಸಂಬಂಧ ಆರೋಪಿ ಫಯಾಜ್​​ನನ್ನ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಕರೆತಂದಿದ್ದಾರೆ. ನ್ಯಾಯಾಧೀಶರ ಮುಂದೆ ಫಯಾಜ್​ಗೆ DNA ಟೆಸ್ಟ್​ ನಡೆಯಲಿದೆ.

1ನೇ JMFC ನ್ಯಾಯಾಲಯಕ್ಕೆ ಅಧಿಕಾರಿಗಳು ಆರೋಪಿಯನ್ನ ಕರೆತಂದಿದ್ದು, ನ್ಯಾಯಾಧೀಶರ ಸಮ್ಮುಖದಲ್ಲಿ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆ ಮಾಡಲಿದ್ದಾರೆ. ಸಿಐಡಿ ಅಧಿಕಾರಿಗಳು ಹಾಗೂ ಕಿಮ್ಸ್ ವೈದ್ಯರಿಂದ DNA ಟೆಸ್ಟ್​ ನಡೆಸಲಾಗುತ್ತದೆ.

ಏ.18 ರಂದು ಹಾಡುಹಗಲೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ ಅವರ ಪುತ್ರಿಯ ಕೊಲೆ ನಡೆದಿತ್ತು. ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ನೇಹಾ ಕೊಲೆ ಪ್ರಕರಣವನ್ನು ಸಿಐಡಿ ಟೀಂ ತನಿಖೆ ನಡೆಸುತ್ತಿದ್ದು, ಆರೋಪಿ ಫಯಾಜ್​ನನ್ನು ವಶಕ್ಕೆ ಪಡೆದುಕೊಂಡಿತ್ತು. ಇದೀಗ ಆರೋಪಿ ಫಯಾಜ್​​ನನ್ನ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಕರೆತಂದಿದ್ದಾರೆ.

ಇದನ್ನೂ ಓದಿ : ಕೋಲಾರದಲ್ಲಿ ಜೆಡಿಎಸ್​ಗೆ ಮತ ಹಾಕಿದ್ದಕ್ಕೆ ಹಲ್ಲೆ – ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಆರೋಪ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here