Download Our App

Follow us

Home » ಅಪರಾಧ » ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್​ ಪ್ರಕರಣ – SIT ತನಿಖೆಗೆ ಸರ್ಕಾರ ಆದೇಶ..!

ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್​ ಪ್ರಕರಣ – SIT ತನಿಖೆಗೆ ಸರ್ಕಾರ ಆದೇಶ..!

ಬೆಂಗಳೂರು : ಲೋಕಸಭೆ ಚುನಾವಣೆಯ ಹೊಸ್ತಿಲಲ್ಲೇ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿರುವ ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್​ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್‌ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿ, ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್​ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಸೋಷಿಯಲ್​ ಮೀಡಿಯಾದಲ್ಲಿ ಕೆಲ ದೃಶ್ಯಗಳು ಹರಿದಾಡಿದ್ದು, ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ತನಿಖೆಗೆ  CID ADGP ಬಿ.ಕೆ.ಸಿಂಗ್​ ನೇತೃತ್ವದಲ್ಲಿ SIT ರಚನೆ ಮಾಡಲಾಗಿದೆ. ಈ ತಂಡದಲ್ಲಿ ಇಬ್ಬರು ಎಸ್​ಪಿಗಳು, ಐವರು DySPಗಳು ಸೇರಿ ಇತರೆ ಅಧಿಕಾರಿಗಳು ಇರಲಿದ್ದು, ಎಸ್​ಐಟಿ ಶೀಘ್ರವೇ ಪ್ರಕರಣ ದಾಖಲಿಸಿ ತನಿಖೆಗೆ ಮುಂದಾಗಲಿದೆ. ಯಾವುದೇ ಕ್ಷಣ ಪ್ರಜ್ವಲ್​ ರೇವಣ್ಣಗೆ ನೋಟಿಸ್ ನೀಡುವ ಸಾಧ್ಯತೆಯಿದೆ.

ಈ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿ, ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್​ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮಹಿಳಾ ಆಯೋಗದ ಪತ್ರ ಆಧರಿಸಿ ತನಿಖೆಗೆ ಆದೇಶಿಸಿದೆ. ಹಿರಿಯ ಅಧಿಕಾರಿ ನೇತೃತ್ವದಲ್ಲಿ ತನಿಖಾ ತಂಡ ಮಾಡಿದ್ದೇವೆ. ಪ್ರಜ್ವಲ್​​ ವಿದೇಶಕ್ಕೆ ಹೋಗಿರುವ ಮಾಹಿತಿ ಇದೆ. ಯಾವುದೇ ಕ್ಷಣ SIT ನೋಟಿಸ್​ ನೀಡಿ ವಿಚಾರಣೆ ಮಾಡಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನ ಯಲಹಂಕದಲ್ಲಿ ಸರಣಿ ಅಪಘಾತ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರು : ಕುಡಿದ ಮತ್ತಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಹೊಡೆದಾಟ – ವಿಡಿಯೋ ವೈರಲ್​..!

ಬೆಂಗಳೂರು : ಬೆಳಂದೂರಿನ ಜುನ್ನಸಂದ್ರದ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಗಲಾಟೆ ನಡೆದಿದೆ. ಕುಡಿದ ನಶೆಯಲ್ಲಿ ಹುಡುಗರು ಹೊಡೆದಾಡಿಕೊಂಡಿದ್ದು, ಪುಂಡರ ಕ್ವಾಟ್ಲೆಗೆ ಅಕ್ಕಪಕ್ಕದ ನಿವಾಸಿಗಳು ಹೈರಾಣಾಗಿದ್ದಾರೆ. ಯುವಕರ

Live Cricket

Add Your Heading Text Here