ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ – 7 ಕಾರುಗಳು ಜಖಂ!

ಹಾಸನ : ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚೌಲಗೆರೆ ಟೋಲ್ ಬಳಿ ಭಾನುವಾರ ರಾತ್ರಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 7 ಕಾರುಗಳು ಜಖಂಗೊಂಡಿವೆ.

ಇತ್ತೀಚೆಗೆ ಹೊಸದಾಗಿ ಆರಂಭಗೊಂಡ ಚೋಲಗೆರೆ ಟೋಲ್‌ ಬಳಿ ಸಾಲುಗಟ್ಟಿ ವಾಹನಗಳು ನಿಂತಿದ್ದವು. ಈ ವೇಳೆ ಅತಿ ವೇಗವಾಗಿ ಬಂದ ಕಾರೊಂದು ನಿಂತಿದ್ದ ಕಾರುಗಳಿಗೆ ಡಿಕ್ಕಿಯಾಗಿದೆ. ಪರಿಣಾಮ 7 ಕಾರುಗಳು ಜಖಂಗೊಂಡಿವೆ. 

ವೀಕೆಂಡ್ ಹಿನ್ನಲೆಯಲ್ಲಿ ಹೈವೆಯಲ್ಲಿ ವಾಹನಗಳ ಸಂಚಾರ ಹೆಚ್ಚಿದ್ದು, ಸರಣಿ ಅಪಘಾತದಿಂದ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.ಬಳಿಕ ಪೊಲೀಸರು ಜಖಂಗೊಂಡ ವಾಹನವನ್ನು ತೆರವುಗೊಳಿಸಿ, ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಅಪಘಾತದಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

Btv Kannada
Author: Btv Kannada

Leave a Comment

Read More