ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ಮೆಂಟ್ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಕುಶಾಲ್ (15), ಚೇತನ್ (45), ರೂಪಾಲಿ (43), ಪ್ರಿಯಂವಧಾ (65) ಎಂದು ಗುರುತಿಸಲಾಗಿದೆ.

ಚೇತನ್ ಮೊದಲಿಗೆ ತನ್ನ ತಾಯಿ ಪ್ರಿಯಂವಧಾ, ಪತ್ನಿ ರೂಪಾಲಿ ಮತ್ತು ಮಗ ಕುಶಾಲ್ಗೆ ವಿಷವುಣಿಸಿ ಸಾಯಿಸಿ ನಂತರ ತಾನು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. 4 ಜನರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ, ವಿದ್ಯಾರಣ್ಯಪುರಂ ಇನ್ಸ್ಪೆಕ್ಟರ್ ಮೋಹಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: Btv Kannada
Post Views: 852









