ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಚೊಚ್ಚಲ ನಟನೆಯ ‘ಜೂನಿಯರ್’ ಸಿನಿಮಾ ಇಂದು ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಿದೆ. ವೈರಲ್ ವೈಯಾರಿ ಹಾಡಿನ ಮೂಲಕವೇ ಜೂನಿಯರ್ ಚಿತ್ರಕ್ಕೆ ಭಾರಿ ಹೈಪ್ ಸೃಷ್ಟಿಯಾಗಿದ್ದು, ಈ ಸಿನಿಮಾದಲ್ಲಿ ಕಿರೀಟಿಗೆ ಜೋಡಿಯಾಗಿ ಶ್ರೀಲೀಲಾ ನಟಿಸಿದ್ದಾರೆ. ಬೆಂಗಳೂರಿನ ಗಾಂಧಿನಗರ ಸೇರಿ 1116ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ‘ಜೂನಿಯರ್’ ಅಬ್ಬರಿಸಿದ್ದು, ಎಲ್ಲೆಡೆ ಚಿತ್ರ ಹೌಸ್ಫುಲ್ ಪ್ರದರ್ಶನ ಕಂಡಿದೆ.

ಮೊದಲ ದಿನವೇ ‘ಜೂನಿಯರ್’ ಭಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿದ್ದು, ಈ ಸಿನಿಮಾದಲ್ಲಿ ಕಿರೀಟಿ ನಟನೆ ಹಾಗೂ ಭರ್ಜರಿ ಢ್ಯಾನ್ಸ್ಗೆ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ರಾಧಾ ಕೃಷ್ಣ ನಿರ್ದೇಶಿಸಿರುವ ಈ ಸಿನಿಮಾ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಬಿಡುಗಡೆಯಾಗಿದೆ. ದಕ್ಷಿಣ ಭಾರತದ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ಕಿರೀಟಿ ಮೊದಲ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಬಿಗ್ ಬಜೆಟ್‌ನಲ್ಲಿ ಸಿನಿಮಾ ಮೂಡಿ ಬಂದಿದೆ. ‘ಜೂನಿಯರ್’ ಕಾಮಿಡಿ, ಆಕ್ಷನ್, ಎಮೋಶನ್ ಎಲ್ಲವೂ ಇರುವ ಭರ್ಜರಿ ಸಿನಿಮಾ.

ಚಿತ್ರದಲ್ಲಿ ಕಿರೀಟಿ ರೆಡ್ಡಿ ಭರ್ಜರಿ ಡ್ಯಾನ್ಸ್ ಮಾಡಿದ್ದು, ಪ್ರೇಕ್ಷಕರಿಗೆ ಸಖತ್ ಎಂಟರ್ಟೈನ್ಮೆಂಟ್ ನೀಡಿದೆ. ಅಲ್ಲದೇ ಕಿರೀಟಿ ಅವರ ಸಾಹಸ ದೃಶ್ಯಗಳು ಸಿನಿಪ್ರಿಯರಿಗೆ ಇಷ್ಟವಾಗಿದೆ. ಈ ಚಿತ್ರದ ಭಾವನಾತ್ಮಕ ಸೀಸನ್‌ಗಳು ಪ್ರೇಕ್ಷಕರ ಮನಮುಟ್ಟುವಲ್ಲಿ ಯಶಸ್ವಿಯಾಗಿದೆ. ಅಲ್ಲದೇ ಕ್ಲೈಮ್ಯಾಕ್ಸ್‌ನಲ್ಲಿನ ಒಂದು ಟ್ವಿಸ್ಟ್ ಸಖತ್ ಆಗಿದೆ.

ಕ್ರೇಜಿಸ್ಟಾರ್ ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್ ಮುಖ್, ಅಚ್ಯುತ್ ಕುಮಾರ್, ಸುಧಾರಾಣಿ ಜೂನಿಯರ್ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕಿರೀಟಿಗೆ ಜೋಡಿಯಾಗಿ ನಟಿ ಶ್ರೀಲೀಲಾ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ಇನ್ನೂ ಹಲವು ತಾರೆಯರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ರಾಕ್ ಸ್ಟಾರ್ ಖ್ಯಾತಿಯ ದೇವಿಶ್ರೀ ಪ್ರಸಾದ್ ಸಂಗೀತ, ‘ಬಾಹುಬಲಿ’ ಸಿನಿಮಾ ಖ್ಯಾತಿಯ ಕಣ್ಣು ಕೆ ಸೆಂಥಿಲ್ ಕುಮಾರ್ ಕ್ಯಾಮೆರಾ ನಿರ್ದೇಶನ, ಭಾರತೀಯ ಚಿತ್ರರಂಗದ ಖ್ಯಾತ ಸಾಹಸ ನಿರ್ದೇಶಕ ಪೀಟರ್ ಹೆನ್ ಸಾಹಸ ಚಿತ್ರಕ್ಕಿದೆ.
ಇದನ್ನೂ ಓದಿ : ಕನ್ನಡ ಅನುವಾದದಲ್ಲಿ ಲೋಪ – ಸಿಎಂ ಸಿದ್ದರಾಮಯ್ಯ ಬಳಿ ಕ್ಷಮೆಯಾಚಿಸಿದ ಮೆಟಾ ಸಂಸ್ಥೆ!







