ಬೆಂಗಳೂರು : ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದು, ಈ ಹಿನ್ನೆಲೆಯಲ್ಲಿ ಜೆಡಿಎಸ್ನ ಶಾಸಕರು, ಮುಖಂಡರಿಂದಲೇ ಪ್ರಜ್ವಲ್ ರೇವಣ್ಣ ಉಚ್ಛಾಟನೆಗೆ ಒತ್ತಡ ಹೆಚ್ಚಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹುಬ್ಬಳ್ಳಿಯಲ್ಲಿ ಜೆಡಿಎಸ್ ಪಕ್ಷದ ಕೋರ್ ಕಮಿಟಿ ಸಭೆ ನಡೆದಿದೆ. ಈ ಸಭೆಯಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಿ, ಆದೇಶ ಹೊರಡಿಸಲಾಗಿದೆ.
ಜೆಡಿಎಸ್ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮದ ಬಗ್ಗೆ ಚರ್ಚೆಯಾಗಿದೆ. ಅಶ್ಲೀಲ ವಿಡಿಯೋ ವೈರಲ್ ಆದ ಬಳಿಕ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಶಾಸಕರು, ಮುಖಂಡ ಒತ್ತಾಯ ಮಾಡಿದ್ದರು. ಹೀಗಾಗಿ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ಬಂಡೆಪ್ಪ ಕಾಶಂಪುರ, ಸಾರಾ ಮಹೇಶ್, ದೊಡ್ಡಪ್ಪಗೌಡ ಪಾಟೀಲ್ ಸೇರಿ ಹಲವರು ಭಾಗಿಯಾಗಿದ್ದಾರೆ.
ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ ಅವರು ಹಾಸನದಲ್ಲಿ ಪೆನ್ ಡ್ರೈವ್ ಹಂಚಿಕೆಯ ಹಿಂದೆ ಮಹಾನ್ ನಾಯಕನ ಕೈವಾಡ ಇದೆ. ಮಹಿಳೆಯರ ಬಗ್ಗೆ ಮಾತಾಡೋ ಮಹಾನ್ ನಾಯಕನಿಂದ ಮಾನ ಹರಾಜಾಗಿದೆ. ಪಕ್ಷದ ಇಮೇಜ್ಗೆ ಧಕ್ಕೆಯಾಗಬಾರದೆಂಬ ಕಾಳಜಿ ಇದೆ. ಇಲ್ಲಿ ಯಾರನ್ನೂ ಕ್ಷಮಿಸೋ ಪ್ರಶ್ನೆಯೇ ಇಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇಬೇಕು. ನಾವು ಯಾರನ್ನೂ ರಕ್ಷಿಸೋ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ಒಂದು ವೇಳೆ SIT ತನಿಖೆಯಲ್ಲಿ ಆರೋಪ ಸಾಬೀತಾದ್ರೆ ಪ್ರಜ್ವಲ್ ರೇವಣ್ಣನನ್ನು ಶಾಶ್ವತವಾಗಿ ಪಕ್ಷದಿಂದ ಉಚ್ಚಾಟನೆ ಮಾಡಲಾಗುತ್ತದೆ ಎಂದು ಹೆಚ್ಡಿಕೆ ಹೇಳಿದ್ದಾರೆ.
ಇದನ್ನೂ ಓದಿ : ಪ್ರಜ್ವಲ್ ಪೆನ್ಡ್ರೈವ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಪ್ರಜ್ವಲ್ ರೇವಣ್ಣ ಕಾರ್ ಡ್ರೈವರ್..!