ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ವ್ಹೀಲಿಂಗ್ ಹುಚ್ಚಾಟ ಹೆಚ್ಚಾಗುತ್ತಿದೆ. ಇದೀಗ ವ್ಹೀಲಿಂಗ್ ಹುಚ್ಚಾಟ ಪ್ರಶ್ನೆ ಮಾಡಿದ್ದಕ್ಕೆ ಯುವಕರ ಮೇಲೆ ಗುಂಪೊಂದು ಮನಸೋ ಇಚ್ಛೆ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವಾಜಿದ್ ಮತ್ತು ಸ್ನೇಹಿತರ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ. ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭರತ್ ರಾಜ್, ಅಜಿತ್ ಮತ್ತು ವರುಣ್ ಎಂಬುವರ ಮೇಲೆ ಹಲ್ಲೆ ವಾಜಿದ್ ಮತ್ತು ಸ್ನೇಹಿತರು ಚಾಕು, ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ.
ಎರಡು ಗಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಒಬ್ಬ ಯುವಕನಿಗೆ ಗಂಭೀರ ಗಾಯವಾಗಿದೆ. ಇನ್ನು ಘಟನೆಯ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಲಾಗಿದೆ.
ಇದನ್ನೂ ಓದಿ : ಪ್ರಜ್ವಲ್ ಪೆನ್ಡ್ರೈವ್ ಕೇಸ್ನಲ್ಲಿ ಯಾರನ್ನೂ ರಕ್ಷಣೆ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ – ಡಾ.ಜಿ.ಪರಮೇಶ್ವರ್..!
Post Views: 418