Download Our App

Follow us

Home » ಸಿನಿಮಾ » ಕಿರುತೆರೆ ವೀಕ್ಷಕರಿಗೆ ಗುಡ್ ನ್ಯೂಸ್ : ಸ್ಟಾರ್ ಸುವರ್ಣದಲ್ಲಿ ಬರ್ತಿದೆ ಹೊಸ ಧಾರಾವಾಹಿ “ಜಾನಕಿ ಸಂಸಾರ”..!

ಕಿರುತೆರೆ ವೀಕ್ಷಕರಿಗೆ ಗುಡ್ ನ್ಯೂಸ್ : ಸ್ಟಾರ್ ಸುವರ್ಣದಲ್ಲಿ ಬರ್ತಿದೆ ಹೊಸ ಧಾರಾವಾಹಿ “ಜಾನಕಿ ಸಂಸಾರ”..!

ಕನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ ಪರಿಕಲ್ಪನೆಗಳೊಂದಿಗೆ ಮನರಂಜನೆಯ ಕ್ರಾಂತಿಯನ್ನೇ ಹುಟ್ಟು ಹಾಕಿದೆ. ಈ ಸಾಲಿಗೆ ಸೇರ್ಪಡೆಯಾಗುತ್ತಿರುವ ಹೊಸ ಧಾರಾವಾಹಿ ‘ಜಾನಕಿ ಸಂಸಾರ’.


ಇದೊಂದು ತುಂಬು ಕುಟುಂಬದ ಕಥೆ. ಈ ಮನೆಯ ಹಿರಿ ಸೊಸೆ ಜಾನಕಿ, ಇಡೀ ಸಂಸಾರದ ಹೊಣೆ ಹೊತ್ತವಳು. ಎಷ್ಟೇ ಕಷ್ಟ ಬಂದರು ಎದುರಿಸುವ ಛಲಗಾರ್ತಿ. ವಿದ್ಯಾವಂತೆಯಾಗಿರುವ ಜಾನಕಿ ತನ್ನ ಸಂಸಾರದ ಜೊತೆ ಉದ್ಯೋಗವನ್ನು ಸರಿ ಸಮಾನಾಗಿ ನಿಭಾಯಿಸುತ್ತಿರುತ್ತಾಳೆ. ಸದಾಕಾಲ ಮನೆ ಮಂದಿಯನ್ನು ಒಗ್ಗಟ್ಟಾಗಿಡಲು ಬಯಸುವ ಜಾನಕಿಯ ಸಂಸಾರಕ್ಕೆ ಮನೆಯೊಡೆಯುವ ವ್ಯಕ್ತಿಯ ಆಗಮನವಾದರೆ, ಮುಂದೆ ಜಾನಕಿ ತನ್ನ ಸಂಸಾರವನ್ನು ಹೇಗೆ ಕಾಪಾಡ್ತಾಳೆ? ಎಂಬುದು ಈ ಧಾರಾವಾಹಿಯ ಮುಖ್ಯ ಕಥಾ ಹಂದರ.


‘ಜಾನಕಿ ಸಂಸಾರ’ ಧಾರಾವಾಹಿಯು ಸುಂದರ ತಾರಾಗಣವನ್ನು ಹೊಂದಿದ್ದು, ಕನ್ನಡಿಗರ ಮನಸು ಕದ್ದ ಕಣ್ಮಣಿ, ‘ಕೃಷ್ಣರುಕ್ಮಿಣಿ’ ಧಾರಾವಾಹಿ ಖ್ಯಾತಿಯ ರುಕ್ಮಿಣಿ ಅಲಿಯಾಸ್ ಅಂಜನಾ ಶ್ರೀನಿವಾಸ್ ರವರು 13 ವರ್ಷಗಳ ಬಳಿಕ ಮತ್ತೊಮ್ಮೆ ನಿಮ್ಮನ್ನೆಲ್ಲ ರಂಜಿಸಲು ‘ಜಾನಕಿ’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಸೂರಜ್ ಹೊಳಲು, ಕಾವ್ಯ ಶಾಸ್ತ್ರೀ, ಬಾಲ ನಟಿ ಶ್ರೀ ದಿಶಾ, ಮರೀನ ತಾರಾ, ರವಿ ಭಟ್, ಚಂದನ್ ಸೇರಿದಂತೆ ಇನ್ನು ಅನೇಕ ಅನುಭವಿ ಕಲಾವಿದರು ಅಭಿನಯಿಸುತ್ತಿದ್ದಾರೆ.

ಇದನ್ನೂ ಓದಿ : ‘ಗ್ರೇ ಗೇಮ್ಸ್’ ಟ್ರೇಲರ್‌ ರಿಲೀಸ್ : ಮೇ 10ಕ್ಕೆ ತೆರೆ ಕಾಣಲಿದೆ ವಿಜಯ ರಾಘವೇಂದ್ರ ಚಿತ್ರ..

Leave a Comment

DG Ad

RELATED LATEST NEWS

Top Headlines

15 ಹೀರೋಯಿನ್​ಗಳ ವಿರುದ್ಧ ತನಿಖೆ ಮಾಡಲು ಸರ್ಕಾರಕ್ಕೆ ರಹಸ್ಯ ಪತ್ರ.. ಸ್ಯಾಂಡಲ್​ವುಡ್​​ ಸೆನ್ಸೇಷನ್ ನ್ಯೂಸ್..!

ಚಿತ್ರರಂಗದಲ್ಲಿ ಮತ್ತೆ ಮೀಟೂ ಚರ್ಚೆ ಜೋರಾಗಿದೆ. ಮಲಯಾಳಂ ಸಿನಿಮಾ ಇಂಡಸ್ಟ್ರಿ ಕುರಿತ ಹೇಮಾ ಸಮಿತಿ ವರದಿ ಬಳಿಕ ಇಂಡಸ್ಟ್ರಿಯಲ್ಲಿ ಅಲ್ಲೋಲ-ಕಲ್ಲೋಲವೇ ಆಗಿದೆ. ಅನೇಕ ನಟಿಯರು ತನಗಾದ ಅವಮಾನದ

Live Cricket

Add Your Heading Text Here